LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿ: ಮೂರುವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ- ತಾಯಿ, ಪ್ರಿಯಕರ ನ್ಯಾಯಾಂಗ ಬಂಧನ

ಉಡುಪಿ : ಕುಂದಾಪುರ ತಾಲೂಕಿನ ಅಮಾಸೆಬೈಲು ಎಂಬಲ್ಲಿ ಮೂರುವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಸಿವಿಲ್ ಕೋರ್ಟ್, ಜೆಎಂಎಫ್ ಸಿಯಲ್ಲಿ ಇಬ್ಬರ ಮಧ್ಯಾಂತರ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

 

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಸೆಪ್ಟೆಂಬರ್ 13 ರಂದು ಮಾರಣಾಂತಿಕ ಹಲ್ಲೆಗೊಳಗಾದ ಮಗುವನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.ಪರೀಕ್ಷಿಸಿದ ವೈದ್ಯರು ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳುಹಿಸಿದ್ದರು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹೇಶ ದೇವಾಡಿಗ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿದ ನಂತರ ಅಮಾಸೆಬೈಲು ಠಾಣೆಗೆ ದೂರು ನೀಡಿದ್ದಾರೆ.

ಮಗು ಚೇತರಿಸಿಕೊಂಡ ನಂತರ ತಾಯಿ ಮಗುವನ್ನು ವಿಚಾರಿಸಲಾಗಿದೆ. ಮಗು ಮಂಚದಿಂದ ಜಾರಿ ಬಿದ್ದು ಗಾಯಗೊಂಡಿದೆ ಎಂದು ತಾಯಿ ಹೇಳಿಕೆ ನೀಡಿದ್ದಾಳೆ. ಈ ಪ್ರಕರಣವನ್ನು ಮಕ್ಕಳ ರಕ್ಷಣಾ ಸಮಿತಿ ತೀವ್ರ ವಿಚಾರಣೆ ನಡೆಸಿ, ಹಲ್ಲೆ ಪ್ರಕರಣವನ್ನು ಬಯಲಿಗೆ ಎಳೆದಿದ್ದಾರೆ. ಅಕ್ಟೋಬರ್ 24ರಂದು ಜಾಮೀನು ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿಗಳಿಗೆ ಮಧ್ಯಾಂತರ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ಗಂಭೀರತೆಯನ್ನು ಮನಗಂಡ ಸಹಾಯಕ ಸರಕಾರಿ ಅಭಿಯೋಜಕ ಉದಯ್ ಕುಮಾರ್ ಜಾಮೀನು ರದ್ದು ಮಾಡಲು ಮನವಿ ಮಾಡಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ vs ಇಂಗ್ಲೆಂಡ್: ಟ್ರೋಫಿಗೆ ನನ್ನ ಹೆಸರಿಡಬೇಡಿ- ಸಚಿನ್ ತೆಂಡೂಲ್ಕರ್ ಮನವಿ'ಹೆಂಡತಿ ಮಾತು ಕೇಳದೇ ಏರ್ ಇಂಡಿಯಾ ಹತ್ತಿದ್ರೆ ನಾನೇ ಇರ್ತಿರ್ಲಿಲ್ಲ'- ಡಾ.ಉಮಂಗ್ ಪಟೇಲ್ಇಂದಿನಿಂದ ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸಿಗಲ್ಲಏರ್ ಇಂಡಿಯಾ ಅಪಘಾತದ ವಿವರಗಳನ್ನು ವಿಶ್ಲೇಷಿಸಲು ಅಹಮದಾಬಾದ್‌’ಗೆ ಬಂದಿಳಿದ ಬೋಯಿಂಗ್ ತಜ್ಞರುಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ- ತುರ್ತು ಭೂಸ್ಪರ್ಶಹಾಸನದ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ! ಹೈ ಅಲರ್ಟ್ಇರಾನ್‌-ಇಸ್ರೇಲ್‌ ಸಂಘರ್ಷ - ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಮೃತ್ಯುಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲುಮಾಟ ಮಂತ್ರ ತೆಗೆಯಬೇಕಾದರೆ ಬೆತ್ತಲಾಗಬೇಕು ಎಂದು ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ಅರ್ಚಕ ಸೆರೆಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ..!!