LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ

ಬೆಳಗಾವಿ, (ಸುವರ್ಣಸೌಧ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಪರಿಷತ್ತಿನಲ್ಲಿ ನಡೆದ ಚರ್ಚೆಗೆ ಉತ್ತರ ನೀಡಿದರು.

ಉತ್ತರ ಕರ್ನಾಟಕದ ಬಗ್ಗೆ ಎರಡೂ ಸದನಗಳಲ್ಲಿ ಹೆಚ್ಚು ಸದಸ್ಯರು ಮಾತನಾಡಿದ್ದಾರೆ. ಇಲ್ಲಿ ಬಿಜೆಪಿಯವರು 7 ಜನ ಹಾಗೂ ಕಾಂಗ್ರೆಸ್ ನ 5 ಜನ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಸೇರಿದಂತೆ ಒಟ್ಟು 5 ಗಂಟೆ 48 ನಿಮಿಷ ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಚರ್ಚೆ ಅಧಿವೇಶನದ ಎರಡನೇ ದಿನವೇ ಪ್ರಾರಂಭವಾಗಿದ್ದು ಇದೇ ಮೊದಲನೇ ಬಾರಿ ಎಂದರು.

*ಪ್ರಾದೇಶಿಕ ಅಸಮತೋಲನ ನಿವಾರಣೆಯಿಂದ ಸಮಾನತೆ ಸಾಧ್ಯ*

ವಿಧಾನ ಪರಿಷತ್ ನ ಹಿರಿಯ ಮನೆ ಎಂದು ಕರೆಯಲಾಗುತ್ತಿದ್ದು, ಇಲ್ಲಿನ ಸದಸ್ಯರ ಮಾತಿಗೆ ತೂಕವಿರುತ್ತದೆ. ಸದಸ್ಯರ ಸಲಹೆಗಳು ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಬಹಳ ಮುಖ್ಯವಾಗುತ್ತದೆ. ಕರ್ನಾಟಕದಲ್ಲಿ 6.95 ಲಕ್ಷ ಜನರಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದಲ್ಲಿ 2.96,28,767 ಜನರಿದ್ದಾರೆ. 42% ಮಾತ್ರ ಉತ್ತರ ಕರ್ನಾಟಕದಲ್ಲಿ ಇದ್ದಾರೆ. 58% ದಕ್ಷಿಣ ಕರ್ನಾಟಕದಲ್ಲಿದ್ದಾರೆ. ಉತ್ತರ ಕರ್ನಾಟಕದಲ್ಲಿ 31 ಜಿಲ್ಲೆಗಳಲ್ಲಿ 14 ಉತ್ತರ ಕರ್ನಾಟಕಕ್ಕೆ ಬರುತ್ತವೆ. 224 ವಿಧಾನ ಸಭಾ ಕ್ಷೇತ್ರಗಳಲ್ಲಿ 97 ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಬರುತ್ತವೆ.

ರಾಜ್ಯದ ಸಮಗ್ರ ಅಭಿವೃದ್ಧಿಗೆ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಅಸಮತೋಲನ ನಿವಾರಣೆಯಾಗಿ ಸಮಾನತೆ ಸಾಧಿಸಬೇಕು. ಪ್ರಾದೇಶಿಕ ಅಸಮಾನತೆ ನಿವಾರಿಸದಿದ್ದರೆ, ಜನರ ಕೂಗು ಇದ್ದೇ ಇರುತ್ತದೆ. ಉತ್ತರ ಕರ್ನಾಟಕದ ಬಗ್ಗೆ ಅಭಿವೃದ್ಧಿಯಾಗದೇ ಇರಲು ಹಲವು ಕಾರಣಗಳಿವೆ ಎಂದರು.

*ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನ*

ಬೆಂಗಳೂರು ಹಾಲು ಯೂನಿಯನ್ ಲ್ಲಿ ನೋಡಿದರೆ. ಒಂದು ದಿನಕ್ಕೆ 17 ಲಕ್ಷ ಲೀ. ಉತ್ಪಾದನೆಯಗುತ್ತಿದ್ದು, ಕಲ್ಬುರ್ಗಿ ಹಾಲು ಯೂನಿಯನ್ ದಲ್ಲಿ 67 ಸಾವಿರ ಲೀ. ಹಾಲು ಉತ್ಪಾದನೆಯಾಗುತ್ತದೆ. ಇದು ಪ್ರಾದೇಶಿಕ ಅಸಮಾನತೆಗೆ ಸ್ಪಷ್ಟ ಉದಾಹರಣೆಯಾಗಿದೆ. ಇದು ಜಿಲ್ಲಾವಾರು ತಲಾ ಆದಾಯದ ಮೇಲೂ ಪರಿಣಾಮ ಬೀರುತ್ತದೆ. ಕರ್ನಾಟಕ ರಾಜ್ಯದಲ್ಲಿ ಸರಾಸರಿ ತಲಾ ಆದಾಯ 3,39,813 ರೂ. ಇದೆ. ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿ ನಂ.1 ರಾಜ್ಯವಾಗಿದೆ. ಹೈನುಗಾರಿಕೆ ಚಟುವಟಿಕೆಗಳು , ಕೈಗಾರಿಕೆಗಳು ಜಾಸ್ತಿಯಾದರೆ, ಜನರ ವಲಸೆ ಕಡಿಮೆ , ಆರ್ಥಿಕ ತೆ ಸುಧಾರಿಸಿ, ತಲಾ ಆದಾಯವೂ ಜಾಸ್ತಿಯಾಗುತ್ತದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ತಲಾವಾರು ಆದಾಯ ಹೆಚ್ಚಾಗಿದೆ. ಆದ್ದರಿಂದ ಕರ್ನಾಟಕ ತಲಾವಾರು ಆದಾಯದಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದರು.

*371 ಜೆ ವಿಶೇಷ ಸ್ಥಾನಮಾನ ಕೊಟ್ಟಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ*

ಹೈದರಾಬಾದ್ ಕರ್ನಾಟಕವನ್ನು 371 ಜೆ ಗೆ ಸೇರಿಸಬೇಕೆಂದುಬಹಳ ಹಿಂದಿನಿಂದಲೂ ಕೂಗಿತ್ತು. 1991ರಲ್ಲಿ ಹೆಚ್. ಕೆ.ಡಿ. ಬಿ ಪ್ರಾರಂಭವಾಯಿತು. ನಂತರ 2011_ 13 ರಲ್ಲಿ , 6/11/2013 ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ ಸೇರ್ಪಡೆಯಾಯಿತು. 371 ಜೆ ವಿಶೇಷ ಸ್ಥಾನಮಾನ ಕೊಟ್ಟಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ಬಿಜೆಪಿಯ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರುಅದನ್ನು ತಿರಸ್ಕರಿಸಿದರು. ಹೆಚ್ ಕೆ .ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಶೇ. 85% ರಷ್ಟು ಹೈದರಾಬಾದ್ ಕರ್ನಾಟಕದಲ್ಲಿ ಮೀಸಲಾತಿ ನೀಡಬೇಕೆಂದು ಹಾಗೂ ರಾಜ್ಯದ ಇತರ ಭಾಗಗಳಲ್ಲಿನ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 8% ಮಾಡಬೇಕೆಂದು ಮಾಡಿದ್ದ ಶಿಫಾರಸ್ಸನ್ನು ಯಥಾವತ್ತು ಜಾರಿಗೆ ತರಲಾಯಿತು ಎಂದರು.

*ಬಿಜೆಪಿಯವರು ಉತ್ತರ ಕರ್ನಾಟಕ ಅಭಿವೃದ್ಧಿಯ ವಿರೋಧಿಗಳು*

2013-14 ರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುತ್ತಿದೆ. 2023 ರಲ್ಲಿ 3000 ಕೋಟಿ, 2024/25 ರಲ್ಲಿ 3000 ಕೋಟಿ, 2025/2026 ರಲ್ಲಿ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು ಅನುದಾನ ನೀಡಿರುವುದು 24778 ಕೋಟಿಯಾದರೆ, ಬಿಡುಗಡೆಯಾಗಿರುವುದು 16229 ರೂಪಾಯಿ, ಇಲ್ಲಿಯವರೆಗೆ ವೆಚ್ಚವಾಗಿರುವುದು14890 ರೂಪಾಯಿಗಳು ಎಂದರು. 2013 -14 ರಿಂದ ಇಲ್ಲಿಯವರೆಗೆ ಬಿಜೆಪಿಯ ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಬಿಜೆಪಿಯವರು ಉತ್ತರ ಕರ್ನಾಟಕ ಅಭಿವೃದ್ಧಿಯ ವಿರೋಧಿಗಳು.

*ರಾಜ್ಯಕ್ಕೆ ಬರಬೇಕಾಗಿದ್ದ 11495 ಕೋಟಿ ರೂ. ಕೇಂದ್ರ ಕೊಟ್ಟಿಲ್ಲ*

15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ವಿಶೇಷ ಅನುದಾನ ಸೇರಿದಂತೆ ಒಟ್ಟು 11495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿದ್ದರೂ, ನಂತರ ಕೊಡಲಿಲ್ಲ. ಕಳೆದ ಮೂರು ವರ್ಷದಿಂದ ಈ ಮೊತ್ತವನ್ನು ಕೇಂದ್ರ ಮಂಜೂರು ಮಾಡಲೇ ಇಲ್ಲ. ವಿವಿಧ ಯೋಜನೆಗಳಡಿಯಲ್ಲಿ 125000 ಕೋಟಿ ರೂ.ಗಳು ಕೇಂದ್ರದಿಂದ ರಾಜ್ಯಕ್ಕೆ ಖೋತಾ ಆಗಿದೆ. ರಾಜ್ಯದಿಂದ ತೆರಿಗೆ 4.50 ಲಕ್ಷ ಕೋಟಿ ಸಂಗ್ರಹಣೆಯಾದರೂ , ನಮಗೆ ನ್ಯಾಯಯುತ ಪಾಲು ದೊರೆಯುತ್ತಿಲ್ಲ. ಕೆಕೆಆರ್ ಡಿಬಿ ಗೆ ಅನುದಾನ ಕೊಡದೇ , ಮಹಾರಾಷ್ಟ್ರದ ವಿಧರ್ಭ ಕ್ಕೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ 173 ಟಿಎಂಸಿ ನೀರು ಬಳಸಿಕೊಳ್ಳಲು ಕೇಂದ್ರದಿಂದ ಇದುವರೆಗೆ ಅಧಿಸೂಚನೆ ಬಿಡುಗಡೆ ಮಾಡಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ಅನುಮತಿ ನೀಡಿಲ್ಲ. ಈ ಬಗ್ಗೆ ಅನೇಕ ಬಾರಿ ಕೇಂದ್ರವನ್ನು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.

*ನೀರಾವರಿ ಯೋಜನೆಗೆ ಕೇಂದ್ರದ ಅನುಮತಿ ದೊರೆತಿಲ್ಲ*

ಜಲಜೀವನ್ ಮಿಷನ್ ನಡಿ 13500 ಸಾವಿರ ಕೋಟಿ ರೂ. ಕೇಂದ್ರ ಕೊಡದೇ , ರಾಜ್ಯದಲ್ಲಿ ಅಭಿವೃದ್ಧಿ ಸಾಧಿಸಲು ಹೇಗೆ ಸಾಧ್ಯ? ರಾಜ್ಯದ ಪಾಲಿನ 22000 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಳಸಾ ಬಂಡೂರಿ ಯೋಜನೆಗೆ ಸರ್ವ ಪಕ್ಷ ನಿಯೋಗ ಕೇಂದ್ರಕ್ಕೆ ಒಯ್ಯಲಾಗಿತ್ತು. ಆಗ ಪ್ರಧಾನಿ ಮೋದಿಯವರು ಸರಿಯಾದ ಪರಿಹಾರ ನೀಡಿರಲಿಲ್ಲ. 2018 ರಲ್ಲಿ ಯಡಿಯೂರಪ್ಪನವರು, ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಈ ಸಮಸ್ಯೆ ಬಗೆಹರಿಸುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೆ ಈ ಯೋಜನೆಗೆ ಹಸಿರು ನಿಶಾನೆ ದೊರೆತಿಲ್ಲ ಎಂದರು.

*ಕೇಂದ್ರದಿಂದ ರಾಜ್ಯದ ರೈತರಿಗೆ ಅನ್ಯಾಯ*

ಕೇಂದ್ರ ಸರ್ಕಾರ 1 ಕೆಜಿ ಸಕ್ಕರೆಗೆ ಎಂ.ಎಸ್. ಪಿ ನಿಗದಿ 31 ರೂ 2019 ರಲ್ಲಿ ನಿಗದಿ ಮಾಡಿದೆ. ಆರು ವರ್ಷಗಳಲ್ಲಿ ಏನೂ ಬದಲಾವಣೆ ಮಾಡಿಲ್ಲ. 41 ರೂಗಳಿಗೆ ಹೆಚ್ಚಿಸಲು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಎಥನಾಲ್ ಹಂಚಿಕೆಯನ್ನು ಕೇಂದ್ರ ಸರ್ಕಾರವೇ ಮಾಡುವುದು. ರಫ್ತು ನಿಗದಿ ಮಾಡುವುದು ಕೂಡ ಕೇಂದ್ರ ಸರ್ಕಾರವೇ. ರೈತರಿಗೆ ಅನ್ಯಾಯ ಆಗಲು ಯಾರು ಕಾರಣ? ಎಫ್ ಆರ್ ಪಿ , ಎಂ ಎಸ್ ಪಿ , ಎಥನಾಲ್, ರಫ್ತು ಹೆಚ್ಚು ಮಾಡಲಿ. ಹೀಗಾದರೆ ಸ್ವಾಭಾವಿಕವಾಗಿ ಸಕ್ಕರೆ ಮತ್ತು ಕಬ್ಬಿನ ಬೆಲೆ ಹೆಚ್ಚಾಗುತ್ತದೆ ಎಂದರು.

*ಕೇಂದ್ರ ಸರ್ಕಾರ ನ್ಯಾಯಯುತ ಬೆಲೆ ನಿಗದಿ ಮಾಡಬೇಕು*

ಕಬ್ಬು ಬೆಳೆ: ಕರ್ನಾಟದಲ್ಲಿ 82 ಸಕ್ಕರೆ ಕಾರ್ಖಾನೆಗಳಿದ್ದು ಒಂದೇ ಒಂದು ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಇದೆ. 11 ಸಹಕಾರಿ ಕಾರ್ಖಾನೆಗಳಿವೆ. ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ.

2025/26 ರಲ್ಲಿ 7.40 ಲಕ್ಷ ಪ್ರದೇಶದಲ್ಲಿ ಕಬ್ಬು ಬೆಳೆದಿದ್ದು, 600 ಲಕ್ಷ ಟನ್ ಕಬ್ಬು ಉತ್ಪಾದನೆ ಆಗಬಹುದೆಂದು ಅಂದಾಜಿಸಲಾಗಿದೆ. 2009 2010ರಿಂದ ಎಫ್ ಆರ್ ಪಿ ನಿಗದಿ ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರ ನಿಗದಿಮಾಡುತ್ತದೆ. 9.50 ಯಿಂದ 10.28 ರೂ. ಎಫ್ ಆರ್ ಪಿ ನಿಗದಿ ಮಾಡಿದ್ದಾರೆ.

2022/23 ರಿಂದ 10.25 ಮಾಡಿದ್ದಾರೆ. ಈ ವರ್ಷ ಒಂದು ಟನ್ ಕಬ್ಬಿಗೆ 3550 ರೂಪಾಯಿ ಗಳಿದ್ದು, ಹೆಚ್ ಅಂಡ್ ಟಿ ಕಳೆದರೆ ( 800 ರಿಂದ 900 ರೂ ಗಳಿವೆ )2700 ರೂಪಾಯಿ ನಿಗದಿಯಾಗುತ್ತದೆ. ಹೀಗಾಗಿ ರೈತರು ಹೋರಾಟ ಮಾಡಿದರು. ಸರ್ಕಾರ ರೈತರೊಂದಿಗೆ ಸುದೀರ್ಘ ಸಭೆ ನಡೆಸಿ 10.25 ಇಳುವರಿ ಇದ್ದವರಿಗೆ 3300 ರೂಪಾಯಿ ಕೊಡಲು ತೀರ್ಮಾನಿಸಲಾಯಿತು. ಚಳುವಳಿಯನ್ನು ಹಿಂಪಡೆಯಲಾಯಿತು ಎಂದರು.

*ಉತ್ತರ ಕರ್ನಾಟಕದ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು*

ಉತ್ತರ ಕರ್ನಾಟಕದ ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ , ಪೌಷ್ಠಿಕತೆ ಸುಧಾರಿಸಲು ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ. 10 ಸಾವಿರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರವೇಶ ದೊರೆತಿದೆ, 31 ಸಾವಿರ ಇಂಜಿನಿಯರಿಂಗ್ ಪ್ರವೇಶ ದೊರೆತಿದೆ., 12 ಸಾವಿರ ಡೆಂಟಲ್ ಸೇರಿದಂತೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ದೊರೆತಿದೆ. 371 ಜೆ ಜಾರಿಯಿಂದ ುಉತ್ತ ರ್ನಾಟಕದ ಎಲ್ಲ ಆಯಾಮಗಳಲ್ಲಿಯೂ ಅಭಿವೃದ್ಧಿಯಾಗಿದೆ. ಉದ್ಯೋಗದಲ್ಲಿಯೂ ಒತ್ತು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅದಕ್ಕೆ ಪೂರಕವಾಗಿ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡಬೇಕು ಎಂದರು.

*ನಮ್ಮ ಸರ್ಕಾರ ಅಸ್ಥಿರವಾಗುವ ಪ್ರಶ್ನೆಯೇ ಇಲ್ಲ*

ಎರಡನೇ ಬಾರಿ ನಾನು ಮುಖ್ಯಮಂತ್ರಿಯಾಗಿದ್ದು, ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ.. ಬಿಜೆಪಿಯವರು 9 ವರ್ಷದಲ್ಲಿ 5 ಜನ ಮುಖ್ಯಮಂತ್ರಿಗಳಾಗಿದ್ದರು. ಬಿಜೆಪಿಯ ಪ್ರಯತ್ನ ಹುಳಿಹಿಂಡುವ ಪ್ರಯತ್ನ ಸಫಲವಾಗುವುದಿ್ಲ. ನಮ್ಮ ಸರ್ಕಾರ ಗಟ್ಟಿಯಾಗಿದ್ದು, ಅಸ್ಥಿರವಾಗುವ ಪ್ರಶ್ನೆಯೇ ಇಲ್ಲ. ಇದು ಬಿಜೆಪಿಯ ಭ್ರಮೆ.ತನ್ನ ಪೂರ್ಣ ಅವಧಿಯನ್ನು ಮುಗಿಸಿ , ನಂತರ 2028 ರಲ್ಲೂ ಕಾಂಗ್ರೆಸ ಸರ್ಕಾರ ಅಧಿಕಾರಕ್ಕೆ ಬರಲಿದೆ. 2008 , 2018 ಅವಧಿಯಲ್ಲಿ ಬಿಜೆಪಿ ಜನಾರ್ಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ರಾಜ್ಯದ ಜನರು ಬಿಜೆಪಿಗೆ ಒಮ್ಮತ ತೋರಿಸಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ