LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಉದ್ಯೋಗ ಮೀಸಲಾತಿ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ'? - ವಿಜಯೇಂದ್ರ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ಕೆಲಹೊತ್ತಿನಲ್ಲೇ ತಾತ್ಕಾಲಿಕ ತಡೆ ನೀಡಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ. ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಲಾಗಿದೆ. ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು’ ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ.

ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮೂರು ಬಾರಿ ಯೂಟರ್ನ್ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ ಎಂದು ಕಿಡಿಕಾರಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!