ಉಪ ನಿರ್ದೇಶಕರ ಹುದ್ದೆ: ಅರ್ಜಿ ಆಹ್ವಾನ
ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 6 ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮೇಜರ್ ಲೆಫ್ಟಿನೆಂಟ್ ಕರ್ನಲ್ ಅಥವಾ ನೌಕಾಸೇನೆ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ‍್ಯಾಂಕ್‌ನಿAದ ಬಿಡುಗಡೆ, ನಿವೃತ್ತಿ ಹೊಂದಿರುವರು 2024 ಜನವರಿ 1ಕ್ಕೆ 52 ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತತ್ಸಮಾನ ತರಗತಿಯಲ್ಲಿ ಒಂದು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದ ಸೈನ್ಯಾಧಿಕಾರಿಗಳು 2023 ಸೆಪ್ಟೆಂಬರ್ 18 ರೊಳಗೆ ಸಂಬAಧಿತ ಎಲ್ಲಾ ಶೈಕ್ಷಣಿಕ ಮತ್ತು ಸೇನಾ ದಾಖಲೆಗಳೊಂದಿಗೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಮನರ್ವಸತಿ ಇಲಾಖೆ ಕಛೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಛೇರಿಯಲ್ಲಿ ಖುದ್ದಾಗಿ ದೂರವಾಣಿ ಮುಖಾಂತರ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಕಲ್ಯಾಣ ಮತ್ತು ಮನರ್ವಸತಿ ಇಲಾಖೆ ದೂರವಾಣಿ ಸಂಖ್ಯೆ 080-25589459 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಮನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.