LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉರುಳು ಹಾಕಿ ಪ್ರಾಣಿಗಳನ್ನ ಹತ್ಯೆಗೈಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಶಿವಮೊಗ್ಗ : ಉರುಳು ಹಾಕಿ ಪ್ರಾಣಿಗಳನ್ನು ಹತ್ಯೆಗೈಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವನ್ಯಜೀವಿ ವಿಭಾಗಗಳಲ್ಲಿ ಕಳೆದ 7 ತಿಂಗಳುಗಳಲ್ಲಿ 11 ಕರಡಿ ಮತ್ತು 4 ಚಿರತೆಗಳು ಅಕ್ರಮವಾಗಿ ಅಳವಡಿಸಿದ್ದ ಉರುಳಿಗೆ ಸಿಲುಕಿ ಸಾವನಪ್ಪಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆನೆ ಕಂದಕಗಳ ಬಳಿ ಬೆಳೆದ ಹುಲ್ಲಿನ ನಡುವೆ ಉರುಳು ಅಳವಡಿಸಿ ಕಳ್ಳಬೇಟೆ ಪ್ರಯತ್ನ ನಡೆಯುತ್ತಿದೆ. ಇದರ ಜೊತೆಗೆ ಭದ್ರಾವತಿ, ಚಿಕ್ಕಮಗಳೂರು ಭಾಗದಲ್ಲೂ ಈ ರೀತಿಯ ಸಮಸ್ಯೆ ಇರುವ ಬಗ್ಗೆ ದೂರುಗಳು ಬಂದಿವೆ ಎಂದರು.

ಉರುಳು ಮತ್ತು ತಂತಿ ಬೇಲಿಗೆ ಅಕ್ರಮವಾಗಿ ಹರಿಸುವ ವಿದ್ಯುತ್ ಸ್ಪರ್ಶದಿಂದ ವನ್ಯಜೀವಿಗಳು ಸಾವಿಗೀಡಾಗುತ್ತಿವೆ. ಈ ಕುರಿತಂತೆ ಒಂದು ವಿಶೇಷ ತಂಡ ರಚಿಸಿ ಕಾಡಿನಂಚಿನ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿ, ಉರುಳುಗಳನ್ನು ತೆರವು ಮಾಡಿಸಬೇಕು. ವನ್ಯಜೀವಿಗಳ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸುಂತೆ ನಿರ್ದೇಶಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026