ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು.!
ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ.
ನಿನ್ನೆ ಹಾಸನದ ಸೆನ್ ಪೊಲೀಸ್ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ್ದ ದೂರಿನ್ವಯ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ.
ಹೀಗಾಗಿ ಯಾವುದೇ ಕ್ಷಣದಲ್ಲೂ ಸೂರಜ್ ರೇವಣ್ಣ ಬಂಧನವಾಗುವ ಸಾಧ್ಯತೆ ಇದೆ. ಸಂತ್ರಸ್ತ ಯುವಕ ಹಣಕ್ಕಾಗಿ ಬ್ಲ್ಯಾಕ್‌ವೆುàಲ್ ಮಾಡಿದ ಸಂಬಂಧದ ಆಡಿಯೋ ಗಳನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ಇನ್ನಷ್ಟು ಆಡಿಯೋ ಸೇರಿ ಹಲವು ದಾಖಲೆಗಳನ್ನು ಪಡೆಯಲು ತನಿಖೆ ಮುಂದುವರೆಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.