LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಚ್‌ಡಿಕೆ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಕೆಶಿ ತಿರುಗೇಟು

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂಬ ಎಚ್‌.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಡಿ.ಕೆ ಶಿವಕುಮಾರ್‌ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, 'ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ' ಎಂದು ತಿರುಗೇಟು ನೀಡಿದರು. ಇನ್ನು ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಮಾತನಾಡಿ, ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು. ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾತನಾಡಿ, ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ