ಎಣ್ಣೆ ಪ್ರಿಯರಿಗೆ ಶಾಕ್.! ಈ ದಿನಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧ.!
ದಾವಣಗೆರೆ; ಸೆಪ್ಟೆಂಬರ್ 18 ರಂದು ನಡೆಯುವ ಗೌರಿ ಗಣೇಶ ಹಬ್ಬ ಮತ್ತು ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯ ಸರಬರಾಜನ್ನು ನಿಷೇಧಿಸಲು ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಆದೇಶಿಸಿದ್ದಾರೆ.
ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೆ.18, 20, 22 ರಂದು ಬೆಳಗ್ಗೆ 6 ರಿಂದ ಮಧ್ಯ ರಾತ್ರಿ 12 ರ ವರೆಗೆ ಹಾಗೂ ಸೆ. 26 ಮತ್ತು 28 ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.