LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಥೆನಾಲ್ ಉತ್ಪಾದನೆಯಲ್ಲಿ ಏರಿಕೆ - ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಥೆನಾಲ್ ಉತ್ಪಾದನಾ ಸಾಮರ್ಥ್ಯ 1 ಸಾವಿರದ 589 ಕೋಟಿ ಲೀಟರ್‌ಗೆ ಏರಿಕೆಯಾಗಿದ್ದು, ದೇಶೀಯ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆಹಾರ, ನಾಗರಿಕ ಪೂರೈಕೆ ಮತ್ತು ನವೀಕೃತ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಅವರು, ಎಥೆನಾಲ್ ಉತ್ಪಾದನೆಯಲ್ಲಿ ಮಹತ್ವದ ಸಾಧನೆಯಾಗಿದೆ. ದೇಶೀಯ ಬೇಡಿಕೆಯನ್ನು ಪೂರೈಸಲಾಗುತ್ತಿದೆ. ಎಥೆನಾಲ್ ಉತ್ಪಾದನೆ ಹೆಚ್ಚಳದಿಂದ ರೈತರ ಉತ್ಪನ್ನಗಳಿಗೆ ಹೆಚ್ಚು ಬೆಲೆ ಸಿಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ ವಿತರಿಸುತ್ತಿದೆ. "ಒಂದು ರಾಷ್ಟ್ರ ಒಂದು ಪಡಿತರ ಚೀಟಿ" ಮತ್ತು “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ”ಯಡಿ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸಲಾಗಿದೆ ಎಂದರು.

ಈ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಿದ್ದು, ಸುಮಾರು 11.80 ಲಕ್ಷ ಕೋಟಿ ರೂಪಾಯಿ ವೆಚ್ಚವಾಗಲಿದೆ. ಕಳೆದ ವರ್ಷ ಸುಮಾರು 81.35 ಕೋಟಿ ಫಲಾನುಭವಿಗಳಿಗೆ 497 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ವಿತರಿಸಲಾಗಿದೆ ಎಂದು ಹೇಳಿದರು. ಕರ್ನಾಟಕ ಸರ್ಕಾರ ಅಕ್ಕಿ ಪೂರೈಸುವಂತೆ ಬೇಡಿಕೆ ಸಲ್ಲಿಸಿದರೆ, ಕೆಜಿಗೆ 28 ರೂಪಾಯಿ ದರದಲ್ಲಿ ಸರಬರಾಜು ಮಾಡಲು ಸಿದ್ಧವಿದೆ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನ