LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

 ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್‌ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ

ಉಡುಪಿ : ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ.

ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಮೃತದೇಹವನ್ನು ಅಂಬುಲೆನ್ಸ್‌ ಮೂಲಕ ಸಾಗಿಸಲಾಗುತ್ತಿತ್ತು.

ವೇಗವಾಗಿ ಸಾಗುತ್ತಿದ್ದಾಗ ದಿಢೀರ್‌ ದನ ರಸ್ತೆಗೆ ಅಡ್ಡ ಬಂದಿದೆ. ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬದಿಗೆ ಅಂಬುಲೆನ್ಸ್‌ ಚಲಾಯಿಸಿದಾಗ ಪಲ್ಟಿಯಾಗಿದೆ. ಆದರೆ ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಬಳಿಕ ಸ್ಥಳೀಯರ ನೆರವಿನಿಂದ ಅಂಬುಲೆನ್ಸ್‌ ಅನ್ನು ರಸ್ತೆಗೆ ತಂದು ಮೃತದೇಹವನ್ನು ಕೊಂಡೊಯ್ಯಲಾಗಿದೆ.

ಮಧ್ಯಾಹ್ನ ವಿಕ್ರಂ ಗೌಡನ ಸ್ವಗ್ರಾಮ ಕೂಡ್ಲುಗೆ ಮೃತದೇಹ ತಲುಪಿದೆ. ಕುಟುಂಬಸ್ಥರು ಅಂತಿಮ ವಿಧಿ ವಿಧಾನ ನಡೆಸಿದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ನಡೆಯಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
9ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ಇಂದಿನಿಂದ ವಿಧಾನ ಮಂಡಲ ಕಲಾಪ ಹಲವು ವಿಷಯಗಳ ಬಗ್ಗೆ ಚರ್ಚೆ.!ವಾಹನ ಸಾವರಾರು ಗಮನಿಸ ಬೇಕಾದ ಸುದ್ದಿ.! ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಬಗ್ಗೆ ಹೆಚ್ಚಿನ ಮಾಹಿತಿ.!ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!