E-PAPER
17 Nov 2026, 12:21:24 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಹಾಗೂ ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಸಚಿವರ ಹೇಳಿಕೆ

ಭದ್ರಾವತಿ-23: ನಮ್ಮ ವೀರಶೈವ ಲಿಂಗಾಯತ ಸಮಾಜ ಯಾವುದೇ ಸಮಾಜಕ್ಕೆ ಅನ್ಯಾಯ ಮಾಡುವುದಿಲ್ಲ, ಎಲ್ಲರಿಗೂ ಒಳಿತನ್ನು ಬಯಸುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಭದ್ರಾವತಿ ತಾಲೂಕು ಘಟಕದ ವತಿಯಿಂದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಮತ್ತು ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ದಾವಣಗೆರೆಯಲ್ಲಿ 2 ದಿನ ಪಂಚ ಪೀಠಾಧಿಪತಿಗಳು ಸೇರಿ ಅತ್ಯಂತ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸಿ, ನಮ್ಮ ಸಮಾಜ ಗಟ್ಟಿಯಾಗಿದೆ, ನಮ್ಮ ಸಮಾಜ ಒಗ್ಗಟ್ಟಾಗಿದೆ ಎನ್ನುವ ಸಂದೇಶವನ್ನು ಇಡೀ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದರು. ‌

ನಾನು ಯಾವತ್ತೂ ನಮ್ಮ ಸಮಾಜದ ಜೊತೆಗೆ ಇದ್ದೇನೆ, ಗುರುಗಳು ನೀಡುವ ಮಾರ್ಗದರ್ಶನದಂತೆ ನಡೆಯುತ್ತಿದ್ದೇನೆ, ಸಮಾಜಕ್ಕಾಗಿ ಎಲ್ಲ ರೀತಿಯ ಕೆಲಸ ಮಾಡಲು ಸದಾ ಸಿದ್ಧಳಿದ್ದೇನೆ. ನಾವೆಲ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತರು ಎಂದು ಹೇಳಿದರು.

* *ನಾವೆಂದು‌ ಅನ್ಯಾಯ ಸಹಿಸುವುದಿಲ್ಲ*
ವೀರಶೈವ ಲಿಂಗಾಯತ ಸಮಾಜದವರು ಅನ್ಯಾಯವನ್ನು ಎಂದೂ ಸಹಿಸುವುದಿಲ್ಲ.‌ ಪ್ರಸ್ತುತ ಜಾತಿ ಗಣತಿ ವಿಷಯದಲ್ಲಿ ಸಹ ನಮ್ಮ ಸಮಾಜಕ್ಕೆ ಅನ್ಯಾಯವಾಗಬಾರದೆನ್ನುವ ಕಾರಣಕ್ಕೆ ನಮ್ಮ ಸಮಾಜದ 7 ಮಂತ್ರಿಗಳು ಸೇರಿ ಲಿಖಿತವಾಗಿಯೇ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ತಿಳಿಸಿದೆವು. 10 ವರ್ಷಗಳ ಹಿಂದೆ ಮಾಡಿದ್ದ ಜಾತಿ ಗಣತಿ ಸೂಕ್ತ ರೀತಿಯಲ್ಲಿ ಇಲ್ಲದಿದ್ದ ಕಾರಣ ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ, ಸಮಸ್ಯೆಗಳ ಬಗ್ಗೆ ಸಂಪೂರ್ಣ ಹೊಸದಾಗಿ ಸಮೀಕ್ಷೆ ನಡೆಯುತ್ತಿದೆ. ಹಾಗಾಗಿ ನಮ್ಮ ಸಮಾಜಕ್ಕೆ ನಾವು ಅನ್ಯಾಯವಾಗಲು ಬಿಡುವುದಿಲ್ಲ, ಹಾಗೆಯೇ, ಬೇರೆ ಸಮಾಜಕ್ಕೂ ಅನ್ಯಾಯ ಆಗುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು. ‌

ನಾವೆಲ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತ ಸಮಾಜದವರು. ಒಂದು ರೊಟ್ಟಿ ಯನ್ನು ಎಲ್ಲರಿಗೂ ಹಂಚಿ‌ ತಿನ್ನುವ ಮನೋಭಾವ ಹೊಂದಿರುವ ಸಮಾಜ ನಮ್ಮದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

* *ಬಸವ ತತ್ವದಡಿ ರಾಜ್ಯ ಸರ್ಕಾರ ಕಾರ್ಯ ನಿರ್ವಹಣೆ*
ಸಿದ್ದರಾಮಯ್ಯ ನವರ ನೇತೃತ್ವದ ರಾಜ್ಯ ಸರ್ಕಾರ ಬಸವ ತತ್ವಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಬಸವ ತತ್ವಗಳನ್ನು ಅಳವಡಿಸಿಕೊಂಡಿದೆ. ಸಾಮಾಜಿಕ ನ್ಯಾಯ ನೀಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ ಎಂದರು‌.

* *ಸಮಾಜದ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು*
ನಮ್ಮ ಸಮಾಜದ ಮಕ್ಕಳು ಕೇವಲ ಇಂಜಿನಿಯರಿಂಗ್, ವೈದ್ಯಕೀಯ ಪದವಿ ಪಡೆಯಬೇಕು ಎಂಬ ಮನೋಭಾವದಿಂದ ಹೊರಬಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಸಮಾಜದ ಹೆಚ್ಚು ಮಕ್ಕಳು ಐಎಎಸ್‌, ಐಪಿಎಸ್ ಅಧಿಕಾರಿಗಳಾಗಬೇಕು, ಇದೇ ನನ್ನ ಹೆಬ್ಬಯಕೆ ಹಾಗೂ ಹಾರೈಕೆ ಎಂದು ಕರೆ ನೀಡಿದರು.

ಇಲ್ಲಿ ಬಹಳ ಅರ್ಥಪೂರ್ಣ ಕಾರ್ಯಕ್ರಮವನ್ನು ನಮ್ಮ ವೀರಶೈವ ಲಿಂಗಾಯತ ಸಮಾಜದ ಭದ್ರಾವತಿ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ, ಸಾಧಕರಿಗೆ ಮತ್ತು ಹಿರಿಯರಿಗೆ ಸನ್ಮಾನ ಮಾಡುವುದಕ್ಕೆ ನಮ್ಮ ಹಿರಿಯರು ನಮಗೆ ಹಾಕಿಕೊಟ್ಟ ಪರಂಪರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.

ಇದೇ ವೇಳೆ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿಯವರು, ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಭದ್ರಾವತಿ ತಾಲೂಕು ಘಟಕದ ಅಧ್ಯಕ್ಷರಾದ ಕೆ.ಎಸ್.ವಿಜಯ್ ಕುಮಾರ್, ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಅಣಬೇರು ರಾಜಣ್ಣ, ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ಶಂಕರ್ ಬಿದರಿ, ಭದ್ರಾವತಿ ಶಾಸರು ಹಾಗೂ ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಭದ್ರಾವತಿ ನಗರ ಸಭೆ ಅಧ್ಯಕ್ಷರಾದ ಗೀತಾ ರಾಜ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ರುದ್ರೇಗೌಡ ಸೇರಿದಂತೆ ಸಮಾಜದ ಹಲವು ಮುಖಂಡರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.