LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಎಸ್ಎಲ್ಸಿ, ಐಟಿಐ, ಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ ವ್ಯೂವ್ ಅನ್ನು ಜೂನ್ 2 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

 ಈ ವಾಕ್ ಇನ್ ಇಂಟರ್‌ ವ್ಯೂವ್‌ ನಲ್ಲಿ ಕೊಪ್ಪಳದ ಪ್ರತಿಷ್ಠಿತ ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ‎ಐ.ಟಿ.ಐ ಫಿಟ್ಟರ್, ಐ.ಟಿ.ಐ ವೆಲ್ಡರ್, ಐ.ಟಿ.ಐ ಮೆಕ್ಯಾನಿಕ್, ಐ.ಟಿ.ಐ ಇಲೆಕ್ಟ್ರಿಷಿಯನ್ ಅಥವಾ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಇತರೆ ಪದವಿ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತ 18 ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರೆಸ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ ವ್ಯೂವ್ ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

 ಉದ್ಯೋಕಾಂಕ್ಷಿಗಳು https://forms.gle/uJnyp39f6SRzKqhKA ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ರಾಜ್ಯದ 5 ಹಿರಿಯ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್ಮೇ 28 ರಂದು ಮದ್ಯ ಮಾರಾಟ ನಿಷೇಧಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವುಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಕೆರೆ ಬಳಿ ಶವ ಎಸೆದು ಪರಾರಿSHOCKING: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವುಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನುಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಒನ್‌-ಟೈಮ್‌ ಬಯೋಮೆಟ್ರಿಕ್‌ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ₹2,000 ಹಣ ಕಟ್‌BREAKING: ಬೆಂಗಳೂರಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತ ದುರಂತ: ಬಾಲಕ ಸಾವು, ಇಬ್ಬರು ಕಾರ್ಮಿಕರಿಗೆ ಗಾಯ