ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಬಿಎ, ಬಿಕಾಂ, ಬಿಎಸ್ಸಿ, ಬಿಇ, ಬಿಸಿಎ, ಎಂಸಿಎ, ಎಂಕಾಂ ಪದವೀಧರರಿಗೆ ಸೆ.11ರಂದು ಉದ್ಯೋಗ ಮೇಳ
ಚಿತ್ರದುರ್ಗ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ರಿಂದ 5 ಗಂಟೆಯವರೆಗೆ ತುಮಕೂರು ಜಿಲ್ಲೆಯ ಶಿರಾ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಬಿಎ, ಬಿಕಾಂ, ಬಿಎಸ್ಸಿ, ಬಿಇ, ಬಿಸಿಎ, ಎಂಸಿಎ, ಎಂಕಾಂ ಹಾಗೂ ಇತರೆ ಎಲ್ಲಾ ಅರ್ಹ ಪದವೀಧರ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಪೋಟೋ, ಆಧಾರ್ ಕಾರ್ಡ್ ಹಾಗೂ ಬಯೋಡಾಟಾದೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.
ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/candidatereg ಇಲ್ಲಿ ಉಚಿತವಾಗಿ ನೊಂದಾಯಿಸಿ ಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9606492216 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.