LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏಳು ಬಾರಿ ಗುಂಡು ಹಾರಿಸಿ ಸಿಪಿಐ(ಎಂ) ಮುಖಂಡನಿಗೆ ಗುಂಡಿಕ್ಕಿ ಹತ್ಯೆ.!

ರಾಂಚಿ: ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿರುವ ತಮ್ಮ ಕಚೇರಿಯಲ್ಲಿ ಬುಧವಾರ ಕುಳಿತಿದ್ದ ಸ್ಥಳೀಯ ಸಿಪಿಐ(ಎಂ) ಮುಖಂಡ ಸುಭಾಷ್ ಮುಂಡಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ರಾಂಚಿಯ ದಲದಾಲಿ ಚೌಕ್‌ನಲ್ಲಿರುವ ಸುಭಾಷ್ ಮುಂಡಾ ಅವರ ಕಚೇರಿಯಲ್ಲಿ ರಾತ್ರಿ 7 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಏಳು ಬಾರಿ ಗುಂಡುಗಳನ್ನು ಹಾರಿಸಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪ್ರಕಾಶ್ ವಿಪ್ಲವ್ ಹೇಳಿದ್ದಾರೆ. ಮುಂಡಾ ಅವರು ಹಟಿಯಾ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹಾಗೂ ಮಂದರ್ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಘಟನೆಯ ನಂತರ, ಕ್ರೋಧಗೊಂಡ ಸ್ಥಳೀಯರು ಸ್ಥಳದಲ್ಲಿದ್ದ ಅಂಗಡಿಗಳನ್ನು ಧ್ವಂಸಗೊಳಿಸಿ, ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!