LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂ, ಗ್ರಾ. ಜಿಲ್ಲೆ, : 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಅರ್ಹ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಗೆ ಸೇರಿದ, ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಅಪ್ರೆಂಟಿಸ್ ಮಾಹೆಯಾನ ರೂ.15000/- ಗಳ ಸ್ಟೇಫಂಡ್(ಗೌರವ ಸಂಭಾವನೆ) ನೀಡಲಾಗುವುದು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಆಧಾರ್, ಎಸ್.ಎಸ್. ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ತ್ರಿ-ಪ್ರತಿಯಲ್ಲಿ 2024 ರ ನವೆಂಬರ್ 30 ರೊಳಗಾಗಿ ಉಪನಿರ್ದೆಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.17, ಭಗವಾನ್ ಮಾಹಾವೀರ ರಸ್ತೆ, ವಾರ್ತಾ ಸೌಧ, 2ನೇ ಮಹಡಿ, ಇನ್ಫೆಂಟ್ರಿ ರಸ್ತೆ, ಬೆಂಗಳೂರು-560001 ಗೆ ಸಲ್ಲಿಸುವುದು.

ಆಸಕ್ತರು ಅರ್ಹತೆಗಳು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವುಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!