LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಂದೇ ಹೆಲಿಕಾಪ್ಟರ್‌ನಲ್ಲಿ ಉಪ ರಾಷ್ಟ್ರಪತಿ , ಮಾಜಿ ಪ್ರಧಾನಿ ಬೆಂಗಳೂರಿಗೆ ಪ್ರಯಾಣ

ಮಂಡ್ಯ-ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ್ರು ಶ್ರೀ ಆದಿಚುಂಚನಗಿರಿ ಕ್ಷೇತ್ರದ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಮುಖರಿಬ್ಬರೂ ಭಾರತದ ಸಮಗ್ರ ಅಭಿವೃದ್ಧಿ, ಮುನ್ನಡೆಯ ಕುರಿತು ವಿದ್ಯಾರ್ಥಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಎಲ್ಲಾ ಕ್ಷೇತ್ರಗಳಲ್ಲಿಯೂ ಭಾರತದ ಸಮಗ್ರವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ಇಬ್ಬರೂ ಅಗ್ರಗಣ್ಯರು ಪ್ರತಿಪಾದಿಸಿದರು. ಕಾರ್ಯಕ್ರಮದ ನಂತರ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಂದೇ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇನ್ನು ಕರ್ನಾಟಕ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿಯವರು ಇಂದು ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇನ್ನು ಉಪ ರಾಷ್ಟ್ರಪತಿ ಧನಕರ್‌ರವರು, ಶ್ರೀಮತಿ ಚನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST