LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಡಿಶಾ ರೈಲು ದುರಂತ- ಇನ್ನೂ ಪತ್ತೆಯಾಗದ 29 ಮೃತದೇಹದ ಗುರುತು

ಭುವನೇಶ್ವರ:ಒಡಿಶಾದ ಬಾಲಸೋರ್‌ನಲ್ಲಿ ರೈಲು ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದೆ. ಆದರೂ ಭುವನೇಶ್ವರದ ಏಮ್ಸ್‌ ಆಸ್ಪತ್ರೆಯಲ್ಲಿ ಇರಿಸಲಾದ 29 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಎಐಐಎಂಎಸ್‍ನ‌ ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿತ್ತು. ಆದರಲ್ಲಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದ ಮೃತ ದೇಹಗಳಿಗಾಗಿ ಡಿಎನ್‍ಎ ಪರೀಕ್ಷೆ ನಡೆಸಲಾಗಿದೆ. ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ ಬಳಿಕವಷ್ಟೆ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು. ಅಲ್ಲದೇ ಡಿಎನ್‍ಎ ಪರೀಕ್ಷೆ ಬಳಿಕವೂ ಗುರುತು ಪತ್ತೆಯಾಗದ ಮೃತದೇಹಗಳ ಸಂಸ್ಕಾರದ ಬಗ್ಗೆ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಜೂನ್ 2 ರಂದು ಕೋರಮಂಡಲ್-ಚೆನ್ನೈ ಎಕ್ಸ್‌ಪ್ರೆಸ್, ಯಶವಂತಪುರ-ಹೌರಾ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು ಬಹನಾಗಾ ಬಜಾರ್ ರೈಲು ನಿಲ್ದಾಣದ ಬಳಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 295 ಜನರು ಸಾವನ್ನಪ್ಪಿದ್ದರು. ಸಿಗ್ನಲ್ ವೈಫಲ್ಯವೇ ಬಾಲಸೋರ್ ದುರಂತಕ್ಕೆ ಕಾರಣ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆ