E-PAPER
17 Nov 2026, 12:19:48 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಂದಾಯ ಇಲಾಖೆ ಅಧಿಕಾರಿಗಳ ಸಭೆ- ಪ್ರಗತಿ ಪರಿಶೀಲನೆ

ಬೆಳೆಹಾನಿ ಸಮೀಕ್ಷೆ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ-೨೩: ಜಿಲ್ಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ, ತಕ್ಷಣವೇ ಪರಿಹಾರ ವಿತರಿಸಬೇಕು. ಮನೆ ಹಾನಿಯಾಗಿರುವ ಮಾಹಿತಿಯನ್ನು ನಿಗಮದ ಪೋರ್ಟಲ್ ನಲ್ಲಿ ಅಳವಡಿಸಿ, ಪರಿಹಾರ ಬಿಡುಗಡೆಗೆ ಕ್ರಮ ವಹಿಸಬೇಕು. ಒಂದುವೇಳೆ ಸಮೀಕ್ಷೆಯಲ್ಲಿ ವ್ಯತ್ಯಾಸ, ಲೋಪದೋಷಗಳು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ  ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆ ಹಾನಿಯ ಕುರಿತು ಜಿಲ್ಲೆಯಲ್ಲಿ ಈಗಾಗಲೇ ಜಂಟಿ ಸಮೀಕ್ಷೆ ನಡೆಸಲಾಗಿದೆ. ಈ ಸಮೀಕ್ಷೆಯಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬರುತ್ತಿದೆ. ಬೆಳೆಹಾನಿ ಸಮೀಕ್ಷೆ ಪ್ರಕಾರ ರೈತರಿಗೆ ಪರಿಹಾರ ಹಣ ವರ್ಗಾವಣೆಯಾಗುತ್ತಿಲ್ಲ. ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ರೈತರಿಗೆ ಪರಿಹಾರ ಬಂದಿಲ್ಲ ಎಂದು ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ಈ ರೀತಿಯ ವಿಳಂಬ ತೋರಬಾರದು ಎಂದು ಕೃಷಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಮೀಕ್ಷೆ ಕೈಗೊಂಡ ಬಳಿಕ ಪರಿಹಾರ ಪೋರ್ಟಲ್ ನಲ್ಲಿ ನಮೂದಿಸಿ, ಅಪ್ರೂವಲ್ ನೀಡಿದ ಬೆಳೆಹಾನಿಗೊಳಗಾದ ರೈತರಿಗೆ ಈವರೆಗೂ ಪರಿಹಾರ ಹಣ ವರ್ಗಾವಣೆಯಾಗಿಲ್ಲ. ಕೂಡಲೇ ಅಂತಹ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಧಾರ್-ಆರ್.ಟಿ.ಸಿ ಜೋಡಣೆ ಪೂರ್ಣಗೊಳಿಸಿ:

ಆಧಾರ್- ಆರ್.ಟಿ.ಸಿ ಯಲ್ಲಿ ಹೆಸರುಗಳು ವ್ಯತ್ಯಾಸ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಇಲ್ಲದ ಕಾರಣ ಡಿಬಿಟಿ ಮೂಲಕ ಹಣ ವರ್ಗಾವಣೆಗೆ ತೊಂದರೆಯಾಗಿದೆ. ಕೂಡಲೇ ಅಂತಹ ರೈತರಿಗೆ ಆಧಾರ್ ಲಿಂಕ್ ಮಾಡಲು ಸೂಚನೆ ನೀಡಬೇಕು ಅಥವಾ ರೈತರಿಗೆ ಇಂಡಿಯನ್ ಪೋಸ್ಟ್ ಬ್ಯಾಂಕ್ ಖಾತೆ ತೆರೆಯಲು ಸೂಚನೆ ನೀಡಬೇಕು ಎಂದು ತಿಳಿಸಿದರು.

ಅಥಣಿ, ಗೋಕಾಕ್, ಚಿಕ್ಕೋಡಿ, ಕಾಗವಾಡ ನಿಪ್ಪಾಣಿ ತಾಲ್ಲೂಕಿನಲ್ಲಿ ಹೆಚ್ಚು ಆಧಾರ್-ಆರ್.ಟಿ.ಸಿ ಜೋಡಣೆಯಾಗಿಲ್ಲ. ಒಂದುವೇಳೆ ಎರಡರಲ್ಲಿಯೂ ಹೆಸರು ವ್ಯತ್ಯಾಸ ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು ಗುರುತಿಸಿ ಫ್ರೂಟ್ ತಂತ್ರಾಂಶದಲ್ಲಿ ಆಧಾರ್ ಪ್ರಕಾರ ನೋಂದಣಿ ಮಾಡಿ ಒಂದು ವಾರದೊಳಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೆಲವು ತಾಲ್ಲೂಕುಗಳಲ್ಲಿ ಬಾಕಿ ಉಳಿದಿರುವ ಬೆಳೆಹಾನಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ಅದೇ ರೀತಿಯಲ್ಲಿ ಮನೆ ಹಾನಿಯಾಗಿರುವ ಸಮೀಕ್ಷೆ ಬಾಕಿಯಿದ್ದು, ಪರಿಹಾರ ಕೂಡ ವಿತರಣೆಯಾಗಿಲ್ಲ. ಕೂಡಲೇ ಸಮೀಕ್ಷೆ ಪೂರ್ಣಗೊಳಿಸಿ ಮನೆ ಹಾನಿಗಳಿಗೆ ವಾರ್ಗವಾರು ಪರಿಹಾರ ವಿತರಣೆ ಮಾಡಬೇಕು ಸೂಚಿಸಿದರು.

ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ:

ಪರಿಹಾರ ವಿತರಣೆ ಸಂಬಂಧಿಸಿದ ತಾಲ್ಲೂಕಾ ತಹಶೀಲ್ದಾರ್ ಗಳ ಹಂತದಲ್ಲಿದೆ. ಇಂತಹ ಯಾವುದೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಆಧಾರ್-ಆರ್.ಟಿ.ಸಿ ಜೋಡಣೆ ಕೇವಲ 68% ಮಾತ್ರವಾಗಿದೆ. ಒಂದು ವಾರದೊಳಗೆ ಕನಿಷ್ಠ 85% ರಷ್ಟು ಆಧಾರ್ ಜೋಡಣೆಯಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗ್ರಾಮಲೆಕ್ಕಾಧಿಕಾರಿಗಳಿಗೆ ಆಧಾರ್- ಆರ್.ಟಿ.ಸಿ ಜೋಡಣೆಗೆ ಸೂಚನೆ ನೀಡಬೇಕು.

ಎಲ್ಲ ತಹಶೀಲ್ದಾರ್ ಗಳು ಒಂದು ವಾರದೊಳಗೆ ರೈತರ ಆರ್.ಟಿ.ಸಿ ಗಳಿಗೆ ಆಧಾರ್ ಜೋಡಣೆ ಮಾಡುವಂತೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಬೇಕು. ಆಯಾ ಗ್ರಾಮದ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ಗ್ರಾಮದಲ್ಲೇ ವಾಸವಿದ್ದು ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸಬೇಕು ,ಎಂದು ಜಿಲ್ಲಾಧಿಕಾರಿ ರೋಷನ್ ತಿಳಿಸಿದರು.

ಶುದ್ಧ ಕುಡಿಯುವ ನೀರು ಪೂರೈಕೆ ಕ್ರಮ:

ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಈಗಾಗಲೇ ಸೂಚನೆ ನೀಡಲಾಗಿದೆ. ಪ್ರತಿ ಹದಿನೈದು ದಿನಕ್ಕೊಮ್ಮೆ ಕುಡಿಯುವ ನೀರು ಶುದ್ಧತೆ ಬಗ್ಗೆ ಪರೀಕ್ಷಿಸಬೇಕು. ಅದೇ ರೀತಿಯಲ್ಲಿ ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಂಟಿನ್ ಗಳು ಸಮರ್ಪಕ ಕಾರ್ಯ ನಿರ್ವಹಿಸಬೇಕು.

ಹೊಸ ಇಂದಿರಾ ಕ್ಯಾಂಟಿನ್ ಗಳ ಪ್ರಾರಂಭಕ್ಕೆ ಈಗಾಗಲೇ ಗುರುತಿಸಿದ ಸ್ಥಳಗಳ ಬಗ್ಗೆ ಯಾವುದೇ ಸಮಸ್ಯೆಯಿದಲ್ಲಿ, ಕೂಡಲೇ ಸಂಭಂದಿಸಿದ ಶಾಸಕರ ಗಮನಕ್ಕೆ ತಂದು ಸ್ಥಳ ನಿಗದಿಪಡಿಸಬೇಕು. ಬಳಿಕ ಟೆಂಡರ್ ಕರೆದು ಕ್ಯಾಂಟಿನ್ ನಿರ್ಮಾಣಕ್ಕೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಜನತಾ ದರ್ಶನ ಅರ್ಜಿಗಳ ವಿಲೇವಾರಿ:

ಸಿ.ಎಂ ಜನತಾ ದರ್ಶನದಲ್ಲಿ ಸಲ್ಲಿಕೆಯಾಗಿರುವ ಗೋಕಾಕ್ ತಾಲ್ಲೂಕಿನ ಎರಡು ಅರ್ಜಿಗಳು ಬಾಕಿ ಉಳಿದಿವೆ. ಕೂಡಲೇ ಅರ್ಜಿ ವಿಲೇವಾರಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೋಕಾಕ್ ತಹಶೀಲ್ದಾರ್ ಮೋಹನ್ ಭಸ್ಮೆ ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ರೈತರ ಜಮೀನುಗಳಿಗೆ ರಸ್ತೆಯಿಲ್ಲ ಎಂಬ ದೂರು ಬಂದಿದೆ. ರಸ್ತೆ ನಿರ್ಮಾಣಕ್ಕೆ ಕಂದಾಯ ಇಲಾಖೆಯ ಭೂ ನಕ್ಷೆಯಲ್ಲಿ ಯಾವುದೇ ಹಳೆ ನಕ್ಷೆ ಕೂಡ ಲಭ್ಯವಾಗಿಲ್ಲ ಹಾಗಾಗಿ ಅರ್ಜಿಗಳು ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ,
ಇಂತಹ ಪ್ರಕರಣಗಳಿಗೆ ನ್ಯಾಯಾಲಯದ ಹಂತದಲ್ಲಿ ಇತ್ಯರ್ಥಕ್ಕೆ ಅವಕಾಶವಿದೆ. ಕೂಡಲೇ ಪ್ರಕರಣ ಸರ್ಕಾರಿ ವಕೀಲರಿಗೆ ಹಸ್ತಾಂತರಿಸಬೇಕು ಒಂದುವೇಳೆ ರಸ್ತೆ ನಿರ್ಮಾಣಕ್ಕೆ ನ್ಯಾಲಯದಿಂದ ಆದೇಶ ಬಂದಲ್ಲಿ ಸಂಬಂಧಿಸಿದ ತಹಶೀಲ್ದಾರ್ ಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

15 ನೇ ಹಣಕಾಸು ಯೋಜನೆಯಡಿ ವಿವಿಧ ಕಾಮಗಾರಿಗ ಗಳು ಪ್ರಗತಿ ಹಂತದಲ್ಲಿವೆ. ಮುಂದಿನ ದಿನಗಳಲ್ಲಿ ಪ್ರಾರಂಭಿಸಬೇಕಾದ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.

ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶಕುಮಾರ ಮೀನಾ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಎಲ್ಲ ತಹಶೀಲ್ದಾರಗಳು, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.