Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಡೂರಲ್ಲಿ 30 ಮತದಾರರ ಹೆಸರು ಅಳಿಸಲು ಫಾರಂ-7: ಬಿಜೆಪಿ ಮಾಜಿ ಕೌನ್ಸಿಲರ್ ವಿರುದ್ಧ ಆರೋಪ

ಚಿಕ್ಕಮಗಳೂರು, ಅ. 5 : (ಸಮದರ್ಶಿ ಸುದ್ದಿ) - ಕರ್ನಾಟಕದಲ್ಲಿ ಎಸ್‌ಐಆರ್‌ ನಡೆಯುತ್ತಿರುವ ನಡುವೆಯೇ ಕಡೂರು ಪಟ್ಟಣದ ವಾರ್ಡ್ ನಂ.23ರ ಮುದಿಯಪ್ಪ ಬಡಾವಣೆಯ 30ಕ್ಕೂ ಹೆಚ್ಚು ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರಂ-7 ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಸರು ಅಳಿಸಲು ಗುರುತಿಸಲಾದ 30 ಮತದಾರರಲ್ಲಿ 29 ಮಂದಿ ಮುಸ್ಲಿಮರು ಮತ್ತು ಒಬ್ಬರು ಹಿಂದೂ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದು, ಅರ್ಜಿ ಸಲ್ಲಿಸಿದವರಲ್ಲಿ ಮಾಜಿ ಕೌನ್ಸಿಲರ್ ಹಾಗೂ ಬಿಜೆಪಿ ಸದಸ್ಯ ಮೋಹನ್ ಕುಮಾರ ಅವರ ಹೆಸರು ಇದೆ ಎಂಬ ಆರೋಪ ಕೇಳಿಬಂದಿದೆ.

ಬಿಎಲ್‌ಒಗಳಿಂದ ನೋಟಿಸ್ ಬಂದ ಬಳಿಕವೇ ತಮ್ಮ ಹೆಸರುಗಳನ್ನು ಅಳಿಸಲು ಅರ್ಜಿ ಸಲ್ಲಿಸಿರುವುದು ಮತದಾರರ ಗಮನಕ್ಕೆ ಬಂದಿದೆ. ಇದರಿಂದ ಆಕ್ರೋಶಗೊಂಡ ನಿವಾಸಿಗಳು ಮೂಲ ದಾಖಲೆಗಳೊಂದಿಗೆ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

‘ನಾಗರಿಕ ಮತಕಾವಲು ಸಮಿತಿ’ಯ ಮುನ್ನಾ ಅವರ ಪ್ರಕಾರ, ಅಕ್ಟೋಬರ್ 3ರಂದು ಪ್ರಕರಣ ಗಮನಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದಾಗ ಸಂಬಂಧಪಟ್ಟ ಮತದಾರರು ಕಳೆದ 30ರಿಂದ 35 ವರ್ಷಗಳಿಂದ ಅದೇ ಪ್ರದೇಶದಲ್ಲಿ ವಾಸಿಸುತ್ತಿರುವುದು ತಿಳಿದುಬಂದಿದೆ. “ಒಂದೇ ಸಮುದಾಯದವರನ್ನು ಗುರಿಯಾಗಿಸಿಕೊಂಡು ಫಾರಂ-7 ದುರ್ಬಳಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಪ್ರಕರಣವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ಬಳಿಕ ತಹಶೀಲ್ದಾರರಿಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಮತದಾರರು ಅದೇ ವಿಳಾಸದಲ್ಲಿ ವಾಸಿಸುತ್ತಿರುವುದು ದೃಢಪಟ್ಟರೆ ಅವರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಅಳಿಸುವುದಿಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ತಪ್ಪು ಮಾಹಿತಿ ನೀಡಿ ಫಾರಂ-7 ಸಲ್ಲಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆಯೂ ಪೊಲೀಸರಿಗೆ ಒತ್ತಾಯಿಸಲಾಗಿದೆ. ಈ ವೇಳೆ ಪೊಲೀಸರು ಮಾಜಿ ಕೌನ್ಸಿಲರ್ ಮೋಹನ್ ಕುಮಾರ ಅವರನ್ನು ಸಂಪರ್ಕಿಸಿದಾಗ, “ಪಕ್ಷದಿಂದ ಫಾರಂಗಳನ್ನು ತಂದುಕೊಟ್ಟಿದ್ದರು. ಅದರಲ್ಲಿ ಏನಿದೆ ಎಂಬುದು ಗೊತ್ತಿರಲಿಲ್ಲ. ನಾನು ಕೇವಲ ಸಹಿ ಮಾಡಿದ್ದೆ” ಎಂದು ಅವರು ತಿಳಿಸಿರುವುದಾಗಿ ಮುನ್ನಾ ಹೇಳಿದ್ದಾರೆ. ಈ ಹೇಳಿಕೆಯ ಬಗ್ಗೆ ಪೊಲೀಸರಿಂದ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ರಾಜೇಶ್ವರಿ ಎಂಬುವವರ ಹೆಸರಿನಲ್ಲಿಯೂ ಫಾರಂ-7 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಆರೋಪಿಸಲಾಗಿದೆ.

ವಾರ್ಡ್ ನಂ.23ರ ಕಾಂಗ್ರೆಸ್ ಅಭ್ಯರ್ಥಿ ಅಣ್ಣಾನಾಯಕ, “30 ಮತದಾರರಿಗೆ ಹೆಸರು ಅಳಿಸುವ ಸಂಬಂಧ ನೋಟಿಸ್ ನೀಡಲಾಗಿದೆ. ಇವರಲ್ಲಿ 29 ಮಂದಿ ಮುಸ್ಲಿಮರು. ಮಾಜಿ ಕೌನ್ಸಿಲರ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.

‘ಎದ್ದೇಳು ಕರ್ನಾಟಕ’ ಸಂಘಟನೆಯೂ ಪ್ರಕರಣದ ಕುರಿತು ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದೆ. ಎಸ್‌ಐಆರ್‌ ಸಂದರ್ಭದಲ್ಲಿ ಫಾರಂ-7 ದುರ್ಬಳಕೆಯ ಆರೋಪಗಳು ರಾಜ್ಯದ ಇತರ ಭಾಗಗಳಲ್ಲಿಯೂ ಕೇಳಿಬಂದಿದ್ದು, ಬೆಳಗಾವಿಯಲ್ಲಿ 198, ಭಾಲ್ಕಿಯಲ್ಲಿ 3,244 ಹಾಗೂ ಬೆಂಗಳೂರಿನ ಮಲ್ಲೇಶ್ವರಂನಲ್ಲಿ 778 ಮತದಾರರ ಹೆಸರುಗಳಿಗೆ ಸಂಬಂಧಿಸಿದಂತೆ ಇದೇ ರೀತಿಯ ಆರೋಪಗಳು ಕೇಳಿಬಂದಿವೆ.

ಫಾರಂ-7 ಅರ್ಜಿಗಳನ್ನು ಯಾರು ಸಿದ್ಧಪಡಿಸಿದರು, ಮತದಾರರ ವಿವರಗಳನ್ನು ಯಾರು ಒದಗಿಸಿದರು ಮತ್ತು ಇಷ್ಟು ಮತದಾರರ ಹೆಸರುಗಳನ್ನು ಅಳಿಸಲು ಯಾವ ಆಧಾರದ ಮೇಲೆ ಅರ್ಜಿ ಸಲ್ಲಿಸಲಾಯಿತು ಎಂಬ ಬಗ್ಗೆ ತನಿಖೆ ನಡೆಸಬೇಕೆಂದು ಸಂತ್ರಸ್ತರು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ