ಮಂಡ್ಯ : ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಡೆ ಶ್ರಾವಣ ಶನಿವಾರದ ಅಂಗವಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮದ್ದೂರು ನಗರದಲ್ಲಿ ಶನಿವಾರ ಆಯೋಜಿಸಿದ್ದ, ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಶಾಸಕ ಕೆ.ಎಂ.ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಅವರುಗಳೊಂದಿಗೆ ದೇಗುಲದಲ್ಲಿ ದೇವರ ದರ್ಶನ ಪಡೆದು ಕೈಯಲ್ಲಿ 1.25 ಪೈಸೆ ನಾಣ್ಯ ಹಿಡಿದು ಹರಕೆ ಸಮರ್ಪಿಸಿದರು.
ನಾಗಮಂಗಲ ವಿಧಾನ ಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ 4 ಬಾರಿ ಸಚಿವನಾಗಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅಹರ್ನಶಿ ದುಡಿದ ತೃಪ್ತಿ ನನಗಿದೆ. ದೇವರ ಮತ್ತು ಕ್ಷೇತ್ರದ ಜನರ ಆಶೀರ್ವಾದ ನನ್ನ ಏಳಿಗೆಗೆ ಕಾರಣವಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯದಲ್ಲಿ ತೊಡಗಲು ಆಶೀರ್ವಾದ ನೀಡುವಂತೆ ದೇವರಲ್ಲಿ ಮೊರೆ ಹೋದರು.
ಇದೇ ವೇಳೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ನಗರಸಭಾ ಪೌರಾಯುಕ್ತೆ ರಾಧಿಕಾ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ