E-PAPER
17 Nov 2026, 12:18:37 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕನಕದಾಸರ 525ನೇ ಜಯಂತಿ ಆಚರಣೆ

ಮೂಡಲಗಿ-10: ಸಮಾಜದ ಸಾಮರಸ್ಯಕ್ಕೆ ಕನಕದಾಸರ ಸಂದೇಶಗಳು ದಿವ್ಯ ಔಷದ ದಾಸರಲ್ಲಿ ಶ್ರೇಷ್ಠರಾದ ಕನಕದಾಸರು ದಾಸ ಸಾಹಿತ್ಯದ ಮೂಲಕ ಸಮಾಜದಲ್ಲಿನ ಮೌಡ್ಯವನ್ನು ತೊಲಗಿಸಿ ಜನರಲ್ಲಿ ಐಕ್ಯತೆ ಭಾವನೆಯನ್ನು ಮೂಡಿಸಲು ಅವಿರತವಾಗಿ ಶ್ರಮಿಸಿದ್ದಾರೆ. ಜಾತಿ, ಮತ, ಪಂಥ ಬೇಧವನ್ನು ಹೋಗಲಾಡಿಸಲು ಸಾಹಿತ್ಯ ಚಳವಳಿ ನಡೆಸಿದ್ದಾರೆ. ಕನಕದಾಸರು ಹಾಕಿಕೊಟ್ಟ ಸನ್ಮಾಗರ್ದಲ್ಲಿ ಸಾಗುವ ಮೂಲಕ ಜೀವನದಲ್ಲಿ ಸಾರ್ಥಕತೆ ಪಡೆಯಬೇಕು ಅವರ ಸಂದೇಶಗಳ ಅನುಷ್ಠಾನದ ಮೂಲಕ ಸಾಮರಸ್ಯದ ಸಮಾಜ ನಿರ್ಮಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಶನಿವಾರ ನ-08 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಭಾ ಭವನದಲ್ಲಿ ಕನಕದಾಸರ 525ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಸಂಸದ ಈರಣ್ಣ ಕಡಾಡಿ ಅವರು ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಸಮಾಜದಲ್ಲಿ ಶೋಷಣೆಗೊಳಗಾದವರಿಗೆ ನ್ಯಾಯ ಕೊಡಿಸಲು ಧ್ವನಿ ಎತ್ತಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಹಗಲಿರುಳು ಶ್ರಮಿಸಿದ್ದಾರೆ. ಶ್ರೇಷ್ಠ ಪರಂಪರೆಯಲ್ಲಿ ಬೆಳೆದು ಬಂದ ಕನಕದಾಸರು ಕತ್ತಲೆಯಲ್ಲಿದ್ದ ಸಮಾಜವನ್ನು ಬೆಳಕಿನಡೆಗೆ ಕೊಂಡೊಯ್ದ ಮಹನೀಯರಾಗಿದ್ದಾರೆ. ಹರಿಭಕ್ತ ಸಾರ, ರಾಮಧ್ಯಾನ ಚರಿತ್ರೆ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ' ಎಂದು ಬಣ್ಣಿಸಿದರು.
ಬಿಡಿಸಿಸಿ ಬ್ಯಾಂಕ್ ನಿಕಟಪೂರ್ವ ನಿರ್ದೇಶಕ ಸತೀಶ ಕಡಾಡಿ, ಸಹಕಾರಿ ಸಂಘದ ಉಪಾಧ್ಯಕ್ಷ ಶ್ರೀಶೈಲ ತುಪ್ಪದ, ಪರಪ್ಪ ಮಳವಾಡ, ಸಹದೇವ ಹೆಬ್ಬಾಳ, ಅಡಿವೆಪ್ಪ ಕುರಬೇಟ, ಕಾಡೇಶ ಗೋರೋಶಿ, ತುಕಾರಾಮ ಪಾಲಕಿ, ಮಲ್ಲಪ್ಪ ಹೆಬ್ಬಾಳ, ಸೋಮಲಿಂಗ ಹಡಗಿನಾಳ, ಸಿದ್ದಪ್ಪ ಹೆಬ್ಬಾಳ, ಗುರುನಾಥ ಮಧಬಾಂವಿ, ಉದ್ದಪ್ಪ ಪೂಜೇರಿ, ಪರಪ್ಪ ಗಿರೆಣ್ಣವರ, ಹಣಮಂತ ಕಲಕುಟ್ರಿ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ ಸೇರಿದಂತೆ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.