LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಂಗಳೂರು: ಕನ್ನಡತಿ ಸೀರಿಯಲ್ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಿರಣ್ ರಾಜ್ ಅವರು ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಕಿರಣ್ ರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಬಲಭಾಗಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಸೆಪ್ಟೆಂಬರ್ 12ರಂದು ಕಿರಣ್ ರಾಜ್ ನಟನೆಯ 'ರಾನಿ' ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನವೇ ಈ ರೀತಿಯ ದುರ್ಘಟನೆ ಸಂಭವಿಸಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST