ಬೆಂಗಳೂರು : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗದ ಅಧ್ಯಕ್ಷರನ್ನಾಗಿ ಭರತ್ ಯಾದವ್ ಜಿ. ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ತಿಳಿಸಿದೆ.
ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ನಿರ್ದೇಶನ, ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಚವಟಿಕೆಗಳನ್ನು ಪರಿಣಾಮಕಾರಿಯಾಗಿ ವಿಸ್ತರಿಸುವುದು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಜವಾಬ್ದಾರಿ ನೂತನ ಅಧ್ಯಕ್ಷರಿಗೆ ನೀಡಿ ಆದೇಶಿಸಲಾಗಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಶಿಸ್ತಿಗೆ ಬದ್ಧರಾಗಿ, ರಾಜ್ಯ ಮತ್ತು ಜಿಲ್ಲಾ ಘಟಕಗಳೊಂದಿಗೆ ಸಮನ್ವಯ ಸಾಧಿಸಿ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಭರತ್ ಯಾದವ್ ಜಿ. ಅವರಿಗೆ ಸೂಚಿಸಲಾಗಿದ್ದು, ನೂತನ ಜವಾಬ್ದಾರಿಯನ್ನು ಪ್ರಾಮಾಣಿಕತೆ, ಬದ್ಧತೆ ಹಾಗೂ ಸಮರ್ಪಣಾ ಮನೋಭಾವದಿಂದ ನಿರ್ವಹಿಸುವಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಆಶಿಸಿದೆ.