LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​- 4 ದಿನ ಭಾರೀ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ 4 ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.ಮುಲ್ಕಿ, ಭಾಗಮಂಡಲ, ಮಾಣಿ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಅಂಕೋಲಾ, ಗೋಕರ್ಣ, ದಕ್ಷಿಣ ಕನ್ನಡ ಜಿಲ್ಲೆ, ಸಿದ್ದಾಪುರ, ಆಗುಂಬೆ, ನಾಪೊಕ್ಲು, ಕುಮಟಾ, ಗೇರುಸೊಪ್ಪ, ಹೊನ್ನಾವರ, ಮೂರ್ನಾಡು, ಕೋಟ, ಕೊಟ್ಟಿಗೆಹಾರದಲ್ಲಿ ಕೂಡ ಮಳೆಯಾಗಿದೆ.

ಉಡುಪಿ, ಕಮ್ಮರಡಿ, ಲಿಂಗನಮಕ್ಕಿ, ಬೆಳ್ತಂಗಡಿ, ಸೋಮವಾರಪೇಟೆ, ತಾಳಗುಪ್ಪ, ಶೃಂಗೇರಿ, ಯಲ್ಲಾಪುರ, ಲೋಂಡಾ, ಹುಂಚದಕಟ್ಟೆ, ಕಳಸ, ಜಯಪುರ, ಬನವಾಸಿ, ಹುಣಸೂರು, ಹಾಸನ, ಎಚ್​ಡಿ ಕೋಟೆ, ಸರಗೂರು, ಕುಶಾಲನಗರ, ಅರಕಲಗೂಡು, ಗುಂಡ್ಲುಪೇಟೆಯಲ್ಲಿ ಕೂಡ ಭಾರಿ ಮಳೆಯಾಗಿದೆ.ಉಡುಪಿ ಜಿಲ್ಲೆಯ ತಗ್ಗು ಪ್ರದೇಶದಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಪ್ರವಾಹದಂತಾಗಿದೆ.

ಕೊಡಗಿನಲ್ಲಿ ಮಳೆ ಹೆಚ್ಚಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಇಂದು ದಕ್ಷಿಣ ಒಳನಾಡಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.

ಗಾಳಿಯು ಗಂಟೆಗೆ 35 ಕಿ.ಮೀ ಇಂದ 45 ಕಿ.ಮೀ ವೇಗದಲ್ಲಿ ಬೀಸಲಿದ್ದು, ದಕ್ಷಿಣ ಕನ್ನಡ ಕರಾವಳಿಯಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳು ಏಳುವ ಸಾಧ್ಯತೆ ಇದೆ .ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನ