ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಆರ್ಜಿ ಆಹ್ವಾನ
ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ ಎನ್.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 35 ವರ್ಷದ ಒಳಗಿನವರಾಗಿ, ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ವಿದ್ಯಾಭ್ಯಾಸ ಪೂರ್ಣಗೊಂಡ 4 ತಿಂಗಳ ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅಸಕ್ತರು ಡಿಸೆಂಬರ್ 15 ರೊಳಗಾಗಿ kacdc.karnataka.gov.ind ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 08192230934 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ರೂಪ ಎಸ್.ಟಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.