LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ : ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ 2024-25ನೇ ಸಾಲಿನ ವಿವಿಧ ಯೋಜನೆಯಡಿ ಅನುಕೂಲವಾಗುವಂತೆ  ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಈ ಯೋಜನೆಯಡಿಯಲ್ಲಿ  ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣೀಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ  ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in      ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ, ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೆöÊಟ್  www.kmmd.karnatak.gov.in    ಅಥವಾ ನಿಗಮದ ದೂರವಾಣಿ ಸಂಖ್ಯೆ 080-22374832, 850770004 ಮತ್ತು 8050770005 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ