E-PAPER
17 Nov 2026, 12:20:49 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ

ನ.೧ ರಂದು ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ-೦೮: ಪ್ರತಿವರ್ಷದಂತೆ ಈ ಬಾರಿಯೂ ನ.೧ ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ  ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.೧ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನ.೧ ರಂದು ದೀಪಾವಳಿ ಇರುವ ಹಿನ್ನಲೆಯಲ್ಲಿ‌ ಅದೇ ದಿನ ರಾಜ್ಯೋತ್ಸವ ಆಚರಣೆ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿದ ಬಳಿಕ ನ.೧ ರಂದೇ ರಾಜ್ಯೋತ್ಸವ ಆಚರಿಸಲು ತೀರ್ಮಾನಿಸಲಾಯಿತು.

ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಕನ್ನಡ‌ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ‌ ಕನ್ನಡ ಪರ ಹೋರಾಟಗಾರರು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು. ಈ ಬಾರಿ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆ ಕರ್ನಾಟಕದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಡಿದ ಮಹನೀಯರ ಭಾವಚಿತ್ರಗಳನ್ನು ಮೆರವಣಿಗೆ ಮಾರ್ಗದುದ್ದಕ್ಕೂ ಅಳವಡಿಸಬೇಕು ಎಂದು ಮೆಹಬೂಬ್ ಮಕಾನದಾರ ಅವರು ನೀಡಿದ ಸಲಹೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಬಾರಿಯ ಮೆರವಣಿಗೆಯಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ರೂಪಕಗಳಿಗೆ ಪ್ರಶಸ್ತಿ ನೀಡುವುದರ ಜತೆಗೆ ರಾಣಿ ಚನ್ನಮ್ಮನ ಮೂರ್ತಿಗೆ ಆಕಾಶದಿಂದ ಪುಷ್ಪವೃಷ್ಟಿ‌ ಮಾಡಲು ಪ್ರಯತ್ನಿಸಲಾಗುವದು ಎಂದರು.

ಕರಾಳ ದಿನಾಚರಣೆಗೆ ವಿರೋಧ:

ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಮನವಿಗೆ‌ ಸ್ಪಂಧಿಸಿದ ಜಿಲ್ಲಾಧಿಕಾರಿಗಳು, ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಗೆ ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿಗೆ ಅಶೋಕ ಚಂದರಗಿ ಹೆಸರು ಶಿಫಾರಸ್ಸು:

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ರಾಜ್ಯಮಟ್ಟದ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರರಾದ ಅಶೋಕ ಚಂದರಗಿ ಅವರ ಹೆಸರನ್ನು ಶಿಫಾರಸ್ಸು ಮಾಡಬೇಕು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಅವರ ಹೆಸರನ್ನು ರಾಜ್ಯೋತ್ಸವ ಪ್ರಶಸ್ತಿಗಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ವೇದಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ‌ ವೇದಿಕೆ‌ ಸಿದ್ಧತೆ, ಧ್ವಜಾರೋಹಣ, ಆಂತ್ರಣ ಪತ್ರಿಕೆ, ಪಥಸಂಚಲನ, ಸಾಧಕರಿಗೆ ಸನ್ಮಾನ, ಮೆರವಣಿಗೆ, ರೂಪಕ‌ ವಾಹನಗಳಿಗೆ ಅನುಮತಿ, ಸಾಂಸಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಕನ್ನಡ ಪರ ಹೋರಾಟಗಾರರಾದ ಶ್ರಿನಿವಾಸ ತಾಳೂಕರ ಅವರು ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಸುವರ್ಣ ಸಂಭ್ರಮ ಆಚರಿಸಲಾಗುತ್ತಿದೆ ಈ ಹಿನ್ನಲೆಯಲ್ಲಿ ಹೆಚ್ಚಿನ ಕನ್ನಡ ಪರ ಹೋರಾಟಗಾರರಿಗೆ ಸನ್ಮಾನಿಸಲು ಸಲಹೆ ನೀಡಿದ ಅವರು ರಾಜ್ಯೊತ್ಸವದ ಮೆರವಣಿಗೆಯಲ್ಲಿ ವಿವಾದಾತ್ಮಕ ಧ್ವಜಗಳಿಗೆ ಅನುಮತಿ ನೀಡಬಾರದು ಎಂದರು.

ದೀಪಕ ಗುಡಗನಟ್ಟಿ ಮಾತನಾಡಿ, ಕಳೆದ ಬಾರಿಯಂತೆಯೇ ಈ ಬಾರಿಯು ಚನ್ನಮ್ಮ‌ ವೃತ್ತದ ಪುಷ್ಪಾಲಂಕಾರವನ್ನು ಮಾಡಬೇಕು. ರಾಜ್ಯೋತ್ಸವ ವೀಕ್ಷಣೆಗೆ ಬರುವ ಸಾರ್ವಜನಿಕರ ವಾಹನಗಳಿಗೆ ಸೂಕ್ತ ನಿಲುಗಡೆಗೆ ವ್ಯವಸ್ಥೆ, ರೂಪಕ‌ ವಾಹನಗಳಿಗೆ ಗೌರವ ಧನ ನೀಡಲು ಹಾಗೂ ರೂಪಕ‌ ವಾಹನಗಳ ಮೆರವಣಿಗೆಗೆ ಹೆಚ್ಚಿನ‌ ಸಮಯವಕಾಶ ನೀಡಲು ಮನವಿ ಮಾಡಿದರು.

ಮಹದೇವ ತಳವಾರ ಅವರು, ಸಾಧಕರ‌ ಸನ್ಮಾನದಲ್ಲಿ ಕೇವಲ‌ ಕನ್ನಡ ಪರ ಹೋರಾಟಗಾರರನ್ನು‌ ಮಾತ್ರ ಸನ್ಮಾನಿಸಬೇಕು. ಸನ್ಮಾನ ಸಂದರ್ಭದಲ್ಲಿ ಶಾಶ್ವತವಾಗಿ ಇರುವಂತಹ ಪ್ರಶಸ್ತಿ ಪತ್ರ ಹಾಗೂ ನೆನಪಿನ‌ ಕಾಣಿಕೆಗಳನ್ನು ನೀಡಲು‌ ಸಲಹೆ ನೀಡಿದರು.

ಮೆಹಬೂಬ ಮಕಾನದಾರ ಅವರು, "ಸನ್ಮಾನಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರನ್ನು, ಸಾಧಕರನ್ನು ಗುರುತಿಸಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕು. ಈ ಸಮಿತಿ‌ ಪ್ರತಿವರ್ಷ ಪುನರ್ ರಚನೆಯಾಗಬೇಕು. ಕಳೆದ ಬಾರಿ ರಾಜ್ಯೋತ್ಸವಕ್ಕಿಂತ ಈ ಬಾರಿ ವಿಜೃಂಭಣೆಯಿಂದ ಆಚರಣೆಯಾಗಬೇಕು. ಮೆರವಣಿಗೆ ಸಂದರ್ಭದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಪ್ರದರ್ಶಿಸಬೇಕು. ಅಲ್ಲದೇ ರಾಣಿ ಚನ್ನಮ್ಮನ ಮೂರ್ತಿಗೆ ಹೆಲಿಕ್ಯಾಪ್ಟರ್ ಮೂಲಕ‌ ಪುಷ್ಪ ವೃಷ್ಟಿ ಮಾಡಬೇಕು" ಎಂದು ಸಲಹೆ ನೀಡಿದರು.

ರಾಜೀವ ಟೋಪಣ್ಣವರ ಅವರು ಮಾತನಾಡಿ, ಈ ಬಾರಿ ರಾಜ್ಯೊತ್ಸವ ಮೆರವಣಿಗೆಯಲ್ಲಿ ಬೇರೆ ಬೇರೆ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು. ಮೈಸೂರು ದಸರಾ ಮಾದರಿ ರೀತಿ ಮೆರವಣಿಗೆ ಜರುಗಿಸಲು ಸಲಹೆ ನೀಡಿದರು.
ಸಂಘಟನೆಗಳ ಮುಖಂಡ ಮಲ್ಲೇಶ್ ಚೌಗಲೆ, ಮಹೇಶ್ ಶೀಗಿಹಳ್ಳಿ, ರಾಜೇಂದ್ರ ಸೊಂಟಕ್ಕಿ ಸೇರಿದಂತೆ ವಿವಿಧ ಪದಾಧಿಕಾರಿಗಳು ರಾಜ್ಯೋತ್ಸವ ಆಚರಣೆ ಕುರಿತು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ನಗರ ಪೋಲಿಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ‌ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ, ಜಿಲ್ಲಾ‌ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ
ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ದಿನೇಶಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ, ಇಲಾಖೆಗಳ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.