ಕರ್ನಾಟಕ ರಾಜ್ಯ ಕಾಡುಗೊಲ್ಲ ಸಮುದಾಯಗಳಿಗೆ ವಿವಿಧ ಸಾಲ, ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ. ಪ್ರ: ಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಈ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆಡಿ ಸಾಲ, ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್ , ಬೆಂಗಳೂರು ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ www.kaad.karnataka.govt.in ಅಥವಾ ನಿಗಮದ ಸಹಾಯವಾಣಿ ಸಂ. 08192-230934 ಗೆ ಕರೆ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.