Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

ಕೊಲ್ಲೂರಲ್ಲಿ ನವರಾತ್ರಿ ಸಂಭ್ರಮದ ನಡುವೆ ಅವಘಡ: ಭಕ್ತರ ಮೇಲೆ ಬಿದ್ದ ಬೃಹತ್ ಲೈಟ್ ಸೆಟ್

ಉಡುಪಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ನವರಾತ್ರಿ ಉತ್ಸವದ ಸಂಭ್ರಮದ ನಡುವೆಯೇ ಅನಿರೀಕ್ಷಿತ ಅವಘಡವೊಂದು ಸಂಭವಿಸಿದೆ. ಕಟ್ಟಡವೊಂದರ ಮೇಲ್ಭಾಗದಲ್ಲಿ ಅಳವಡಿಸಲಾಗಿದ್ದ ಬೃಹತ್ ಗಾತ್ರದ ಅಲಂಕಾರಿಕ ವಿದ್ಯುತ್ ದೀಪಗಳ ಚೌಕಟ್ಟು (ಲೈಟ್ ಸೆಟ್) ಭಕ್ತರ ಮೇಲೆ ಉರುಳಿ ಬಿದ್ದ ಪರಿಣಾಮ, ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಸ್ಥಾನದ ಎದುರಿನ ವಾಣಿಜ್ಯ ಸಂಕೀರ್ಣದ ಛಾವಣಿಯ ಮೇಲೆ ಭಾರಿ ಗಾತ್ರದ ಅಲಂಕಾರಿಕ ಲೈಟ್ ಸೆಟ್ ಅಳವಡಿಸಲಾಗಿತ್ತು. ಇಂದು ಮಧ್ಯಾಹ್ನದ ವೇಳೆ ತೀವ್ರ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಹಲವು ಭಕ್ತರು ವಾಣಿಜ್ಯ ಸಂಕೀರ್ಣದ ನೆರಳಿನಲ್ಲಿ ನಿಂತಿದ್ದರು. ಇದೇ ಸಂದರ್ಭದಲ್ಲಿ ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ಮೇಲ್ಭಾಗದಲ್ಲಿದ್ದ ಲೈಟ್ ಸೆಟ್ ನಿಯಂತ್ರಣ ಕಳೆದುಕೊಂಡು ಕೆಳಗೆ ನಿಂತಿದ್ದ ಜನರ ಮೇಲೆ ಕುಸಿದು ಬಿದ್ದಿದೆ.

ಲೈಟ್ ಸೆಟ್ ಬೀಳುತ್ತಿದ್ದಂತೆ ಸ್ಥಳದಲ್ಲಿದ್ದ ಮೂವರು ಭಕ್ತರು ತಕ್ಷಣವೇ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಆದರೆ, ಸ್ಥಳದಲ್ಲಿದ್ದ ವಯೋವೃದ್ಧರೊಬ್ಬರ ತಲೆಗೆ ನೇರವಾಗಿ ಲೈಟ್ ಸೆಟ್ ಬಡಿದಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆ ಕಂಡ ತಕ್ಷಣವೇ ಧಾವಿಸಿದ ಸ್ಥಳೀಯರು ಹಾಗೂ ಇತರ ಭಕ್ತರು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ವೃದ್ಧರನ್ನು ರಕ್ಷಿಸಿ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ನವರಾತ್ರಿ ಸಂಭ್ರಮದಲ್ಲಿದ್ದ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿರುವ ಬೆನ್ನಲ್ಲೇ ಈ ದುರ್ಘಟನೆ ನಡೆದಿರುವುದು ಭಕ್ತರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಸ್ಥಳಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ibl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯ ಹಿತ್ತಲಲ್ಲಿ ಬೃಹತ್ ಹೆಬ್ಬಾವು ಪತ್ತೆ | WATCH VIDEOರಷ್ಯಾ ಸೇನೆಗೆ ಸೇರಿದ ಭಾರತೀಯರೆಷ್ಟು? ಎಷ್ಟು ಮಂದಿ ಸಾವು, ಎಷ್ಟು ಜನ ನಾಪತ್ತೆ? ಸುಪ್ರೀಂಕೋರ್ಟ್‌ಗೆ ಕೇಂದ್ರದ ಮಾಹಿತಿಭಾರತದಲ್ಲಿ CJP ಪ್ರತಿಭಟನೆಗೆ ಅಮೆರಿಕದಿಂದ ಹಣಕಾಸು ನೆರವು ? ಗಾಯಕಿ ಮೇರಿ ಮಿಲ್ಬೆನ್‌ ಗಂಭೀರ ಆರೋಪ!ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆಕಬ್ಬು ಬೆಳೆಗಾರರ ಬೇಡಿಕೆ ಪರಿಶೀಲನೆಗೆ ಕೇಂದ್ರದ ಮಹತ್ವದ ಕ್ರಮ: ರಮೇಶ್ ಚಂದ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆಹಬ್ಬದ ಹೊತ್ತಲ್ಲೇ ರೈಲ್ವೆ ನೌಕರರಿಗೆ ಬಂಪರ್ ಕೊಡುಗೆ: 78 ದಿನಗಳ ಬೋನಸ್ ಗೆ ಮೋದಿ ಸಂಪುಟ ಅನುಮೋದನೆದೇಶವನ್ನೇ ಬೆಚ್ಚಿಬೀಳಿಸಿದ್ದ ಮೀರತ್ ‘ನೀಲಿ ಡ್ರಮ್ ಹತ್ಯೆ ಪ್ರಕರಣ’: ಪತ್ನಿ, ಪ್ರಿಯಕರನಿಗೆ ಮರಣದಂಡನೆಕರ್ನಾಟಕದಲ್ಲಿ ಹಿಂಗಾರು ಮಳೆ ನಿರೀಕ್ಷೆ: ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚಿನ ಎಚ್ಚರಿಕೆ; IMD ಮುನ್ಸೂಚನೆ ಏನು?15,000 ಲಂಚ ಪಡೆಯುತ್ತಿದ್ದಾಗಲೇ ಹೆಸ್ಕಾಂ ಅಧಿಕಾರಿ, ಗುತ್ತಿಗೆದಾರ ಲೋಕಾಯುಕ್ತ ಬಲೆಗೆBREAKING: ಜೆಡಿಎಸ್ ಸೋಶಿಯಲ್ ಮೀಡಿಯಾ ತಂಡದ ಯುವಕ ಪೊಲೀಸರು ವಶಕ್ಕೆ: HDK ಕಿಡಿ