ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ.!
ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕರಿಂದ ಅವರು 20,000 ರೂ. ಲಂಚ ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಇಲಾಖಾ ವಿಚಾರಣೆ ಕೈ ಬಿಡಲು ವಿ.ಎಸ್. ಜಗದೀಶ್ 25,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಮುಂಗಡವಾಗಿ 5000 ರೂ. ಪಡೆದುಕೊಂಡಿದ್ದು, ಉಳಿದ 20 ಸಾವಿರ ರೂಪಾಯಿಗಳನ್ನು ಬುಧವಾರ ಸಂಜೆ ಹೊಸಪೇಟೆ ಕೆಕೆಆರ್ಟಿಸಿ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿರುವ ಕಚೇರಿಯಲ್ಲಿ ಪಡೆಯುವಾಗ ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಶೀಲವಂತ ಹೊಸಮನಿ ನೇತೃತ್ವದಲ್ಲಿ ದಾಳಿ ನಡೆಸಿ ಹಣದ ಸಮೇತ ಬಂಧಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.