Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕೊಳ್ಳೂರು ಗ್ರಾಮದಲ್ಲಿ ರಾತ್ರಿ ಮಿನಿ ಲಾರಿಗಳಿಂದ ಮರಳು ಕಳ್ಳ ಸಾಗಾಣಿಕೆ

ಎರಡು ಮಿನಿ ಲಾರಿಗಳು ರಾತ್ರಿ ಹನ್ನೆರಡು ಗಂಟೆಯ ನಂತರ ಅಕ್ರಮವಾಗಿ ಮರಳು ಸಾಗಾಣಿಕೆಯಲ್ಲಿ ತೊಡಗಿಕೊಂಡಿರುವುದು ಶಹಾಪುರ ತಾಲ್ಲೂಕಿನ ಕೊಳ್ಳೂರು ಎಂ ಗ್ರಾಮದಲ್ಲಿ ಕಂಡು ಬಂದಿದೆ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮದ ಮಧ್ಯೆ ಈ ಎರಡು ಮಿನಿ ಲಾರಿಗಳ ಚಟುವಟಿಕೆ ಅಚ್ಚರಿ ಮೂಡಿಸಿದೆ. ಮರ್ಕಲ್ ಕಡೆಯಿಂದ ಕೊಳ್ಳೂರು ಆಯ್ದು ಶಹಾಪುರ ಕಡೆಗೆ ಸಾಗುವ ಈ ಲಾರಿಗಳು ಪೋಲಿಸ್ ಕಣ್ಣಿಗೆ ಬೀಳುತ್ತಿಲ್ಲವೇ ಎನ್ನುವುದು ಪ್ರಶ್ನೆಯಾಗಿದೆ.

ಜಿಲ್ಲೆಯಲ್ಲಿ ರೌದ್ರಾವತಾರ ತಾಳಿದ ನೈಸರ್ಗಿಕ ಲೂಟಿಗೆ ಜನರಿಂದ ತೀವ್ರ ವಿರೋಧ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡು ನಿಯಂತ್ರಣ ಹೇರಿತ್ತು. ಕಳೆದ ಕೆಲವು ದಿನಗಳಿಂದ ಕೊಳ್ಳೂರು, ಟೊಣ್ಣೂರು, ಗೌಡೂರು ಗ್ರಾಮಗಳಲ್ಲಿ ಮರಳು ದಂದೆ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಸದ್ಯ ನಿನ್ನೆ ಜನ ಆಕ್ರೋಶದ ವರದಿಗಾರನಿಗೆ ರಾತ್ರಿ ಎರಡು ಮಿನಿ ಲಾರಿಗಳು ನಿರಂತರ ಮರಳು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದೆ. ಈ ಕುರಿತು ಮಾಹಿತಿ ಪಡೆಯಲು ಸಂಬಂಧಿಸಿದ ಪೋಲಿಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದಾಗ ಫೋನ್ ಸ್ವೀಕರಿಸಿರುವುದಿಲ್ಲ.

ತಾಲ್ಲೂಕಾಡಳಿತದ ಗಮನಕ್ಕಿರದೆ ರಾತ್ರಿಯ ಹೊತ್ತು ಮಿನಿ ಟ್ರಿಪ್ಪರ್ ಮೂಲಕ ಕಳ್ಳ ಸಾಗಾಣಿಕೆ ಮಾಡುವುದು ಸಾಧ್ಯವಿಲ್ಲ. ಇದರ ಹಿಂದೆ ಈ ಭಾಗದ ಸಂಬಂದಿಸಿದ ಅಧಿಕಾರಿಗಳ ಕೈವಾಡವಿರುತ್ತದೆ. ಒಬ್ಬರು ದಂದೆ ಆರಂಭಿಸಿದರೆ ಅದು ಪ್ರತಿಷ್ಠೆಯ ಪ್ರಶ್ನೆಯಾಗಿ ಸ್ಪರ್ಧೆ ಏರ್ಪಡುತ್ತದೆ. ನಾವೇನು ಕೈಗೆ ಬಳೆಗಳನ್ನು ಹಾಕಿಕೊಂಡಿದ್ದೀವಾ ಎಂಬಂತೆ ಉಳಿದವರೂ ಆರಂಭಿಸುತ್ತಾರೆ. ಆನಂತರ ಮರಳು ಕಳ್ಳ ಸಾಗಾಣಿಕೆ ಎನ್ನುವುದು ಉಗ್ರ ಸ್ವರೂಪ ಪಡೆದುಕೊಳ್ಳುತ್ತದೆ. ಇದನ್ನು ತಾಲ್ಲೂಕು ಆಡಳಿತ ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಸ್ಥಳೀಯರೊಬ್ಬರು.

ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಬಿದ್ದಿರುವಾಗ ಕೊಳ್ಳೂರು ಗ್ರಾಮದಲ್ಲಿ ರಾತ್ರಿ ವೇಳೆ ಕಂಡು ಬಂದಿರುವ ಮಿನಿ ಲಾರಿಗಳ ಕಳ್ಳ ಚಟುವಟಿಕೆ ಅಚ್ಚರಿ ಮೂಡಿಸಿದೆ.

ವರದಿ: ಲಕ್ಷ್ಮೀಕಾಂತ ನಾಯಕnews_1776674832_0_936.webp

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ