LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಳೆದ 10 ವರ್ಷದಲ್ಲಿ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಬರೆ, ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಅಚ್ಛೇ ದಿನ್ ತರುತ್ತೇವೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರಕಾರವು ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರಿಗೆ ಬೆಲೆ ಏರಿಕೆಯ ಬರೆ ಎಳೆದಿರುವುದೇ ಸಾಧನೆಯಾಗಿದೆ. ಇದರಿಂದಾಗಿ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಗುರುವಾರ ಇಲ್ಲಿನ ಫ್ರೀಡಂ ಪಾರ್ಕಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಹತ್ತು ವರ್ಷಗಳ ಹಿಂದೆ ಪೆಟ್ರೋಲ್ ಬೆಲೆ 65 ರೂ. ಇತ್ತು. ಈಗ ಅದು 100 ರೂಪಾಯಿ ದಾಟಿದೆ. ಆಗ 55 ರೂ. ಇದ್ದ ಡೀಸೆಲ್ ಈಗ 95 ರೂ. ಆಗಿದೆ. 450 ರೂ. ಇದ್ದ ಎಲ್.ಪಿ.ಜಿ ಸಿಲಿಂಡರ್ ಬೆಲೆ ಈಗ 1,100 ರೂ. ಆಗಿದೆ. ಇವೇ ಮೋದಿ ಸರ್ಕಾರದ ಕೊಡುಗೆಗಳು ಎಂದು ಅವರು ಅಣಕವಾಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ದೇಶದ ರೈತರ 78 ಸಾವಿರ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿತ್ತು. ಆದರೆ, ಮೋದಿ ಸರ್ಕಾರ ಜನರನ್ನು ಬೆಲೆ ಏರಿಕೆಯ ಚಕ್ರವ್ಯೂಹಕ್ಕೆ ತಳ್ಳಿದೆ ಎಂದು ಅವರು ದೂರಿದ್ದಾರೆ.

ಮೋದಿ ಸರಕಾರಕ್ಕೆ ಜನರ ಬಗ್ಗೆ ಯಾವ ಕಾಳಜಿಯೂ ಇಲ್ಲ. ಅವರ ಸರಕಾರ ಬಂದಮೇಲೆ ಖಾದ್ಯತೈಲ, ಬೇಳೆಕಾಳು, ದಿನಸಿ ಪದಾರ್ಥ, ಔಷಧಗಳು, ಸಿಮೆಂಟ್, ಉಕ್ಕು, ಸಕ್ಕರೆ ಹೀಗೆ ಪ್ರತಿಯೊಂದರ ಬೆಲೆಯೂ ಎರಡು ಪಟ್ಟು ಜಾಸ್ತಿಯಾಗಿದೆ. ಇದರ ಬಗ್ಗೆ ಮಾತನಾಡದ ರಾಜ್ಯ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುವ ಡಾಂಭಿಕತೆ ಪ್ರದರ್ಶಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಚಿವರಾದ ಕೃಷ್ಣ ಭೈರೇಗೌಡ, ಕೆ ಜೆ ಜಾರ್ಜ್, ಎಚ್ ಸಿ ಮಹದೇವಪ್ಪ, ಚೆಲುವರಾಯಸ್ವಾಮಿ, ರಾಮಲಿಂಗ ರೆಡ್ಡಿ, ಎಂ ಸಿ ಸುಧಾಕರ್, ಕೆ ಎಚ್ ಮುನಿಯಪ್ಪ, ಬೈರತಿ ಸುರೇಶ್, ಶಾಸಕ ರಿಜ್ವಾನ್ ಅಹಮದ್ ಮುಂತಾದವರು ಪಾಲ್ಗೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ