LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರೂ ಸಿದ್ದರಾಮಯ್ಯನವರ ರಾಜೀನಾಮೆ ಪಡೆಯುವ ಉತ್ಸಾಹದಲ್ಲಿದ್ದಾರೆ'-ವಿಜಯೇಂದ್ರ

ಬೆಂಗಳೂರು: ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರು ಮನೆಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮೈಸೂರು ಚಲೋ ಪಾದಯಾತ್ರೆಯು ಮುಂದುವರೆಯಿತು. ಈ ಸಂದರ್ಭದಲ್ಲಿ ಅವರು ಮಾಧ್ಯಮವೊಂದರ ಪ್ರತಿನಿಧಿ ಜೊತೆ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರೂ ಸಿದ್ದರಾಮಯ್ಯನವರ ರಾಜೀನಾಮೆ ಪಡೆಯುವ ಉತ್ಸಾಹದಲ್ಲಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಮೈಸೂರು ಚಲೋ ಬೃಹತ್ ಪಾದಯಾತ್ರೆಯು ಆರನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯೆಂಬ ಜನಾಂದೋಲನದಿಂದ ಸಿದ್ದರಾಮಯ್ಯನವರು ಕುರ್ಚಿ ಖಾಲಿ ಮಾಡಬೇಕಾಗುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ನುಡಿದರು.

ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಅವರ ಭರವಸೆಗಳೆಲ್ಲ ಹುಸಿಯಾಗಿವೆ. ಜನರು ಸರಕಾರದ ಬಗ್ಗೆ ವಿಶ್ವಾಸವನ್ನು ಕಳಕೊಂಡಿದ್ದಾರೆ.ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸುವ ನಿರ್ಧಾರಕ್ಕೆ ರಾಜ್ಯದ ಜನತೆ ಬಂದಿದ್ದಾರೆ ಎಂದು ತಿಳಿಸಿದರು.

ಮೈಸೂರಿನ ಕಾಂಗ್ರೆಸ್ ಜನಾಂದೋಲನದಲ್ಲಿ ಬಿಜೆಪಿಯವರೆಲ್ಲರ ಬಗ್ಗೆ ಬಿಚ್ಚಿಡುವುದಾಗಿ ಮುಖ್ಯಮಂತ್ರಿಗಳು ಹೇಳಿದ ಕುರಿತು ಕೇಳಿದಾಗ, ‘ಮುಖ್ಯಮಂತ್ರಿಗಳೇನು ಮುಚ್ಚಿಟ್ಟಿದ್ದಾರೋ ಅದನ್ನು ಮೊದಲು ಬಿಚ್ಚಿಡಲಿ’ ಎಂದು ವಿಜಯೇಂದ್ರ ಅವರು ಉತ್ತರ ಕೊಟ್ಟರು.

ಮೈಸೂರು ಮುಡಾ ಪ್ರಕರಣದಲ್ಲಿ ಸಾವಿರಾರು ಕೋಟಿ ಬೆಲೆಬಾಳುವ ನಿವೇಶನಗಳನ್ನು ಲೂಟಿ ಮಾಡಿದ ಇವರ ಸರಕಾರವು ರಾಜ್ಯದ ಜನರಿಗೆ ಸತ್ಯವನ್ನು ಬಿಚ್ಚಿಡಲಿ ಎಂದು ಆಗ್ರಹಿಸಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾಲೇನಿದೆ, ಪಾತ್ರ ಏನು, ಎಷ್ಟು ಪಾಲು ಹೈಕಮಾಂಡಿಗೆ, ರಾಹುಲ್ ಅವರ ಕುಟುಂಬಕ್ಕೆ ಹೋಗಿದೆ ಎಂದು ಬಿಚ್ಚಿಡಲಿ. ಆಮೇಲೆ ನಮ್ಮದರ ಬಗ್ಗೆ ಚಿಂತನೆ ಮಾಡಲಿ ಎಂದು ಸವಾಲು ಹಾಕಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್