LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಯಕಯೋಗಿ ಶ್ರೀ ಮನಿಪ್ರ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಹುಬ್ಬಳ್ಳಿ: ತಾಲೂಕಿನ ಮಂಟೂರು ಅಡವಿ ಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಮನಿಪ್ರ ಶಿವಲಿಂಗೇಶ್ವರ ಸ್ವಾಮೀಜಿ (82) ಬೆಳಿಗ್ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.

ಹೃದಯಾಘಾತವಾಗಿದ್ದ ಸ್ವಾಮೀಜಿಯವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 11 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದ ಶ್ರೀಗಳು ಬೆಳಿಗ್ಗೆ 1 ಗಂಟೆಗೆ ಕೊನೆಯುಸಿರು ಎಳೆದಿದ್ದಾರೆ. ತಾಲೂಕಿನ ಮಂಟೂರು ಹಾಗೂ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಅಡವಿ ಸಿದ್ಧೇಶ್ವರ ಮಠ, ಹುಬ್ಬಳ್ಳಿ ಹರುಷದೇವರ ಮಠ, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗೆರಕೊಪ್ಪ- ಬೊಪ್ಪಗೊಂಡನಕೊಪ್ಪ ಇಂದುಧರೇಶ್ವರ ಮಠ, ಶಿಕಾರಿಪುರ ತಾಲೂಕು ಬೆಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠ ಹಾಗೂ ಬೀದರ ಜಿಲ್ಲೆ ಬಸವಕಲ್ಯಾಣ ಕೆಳಗಿ ಪೀಠದ ಪೀಠಾಧಿಪತಿಗಳಾಗಿದ್ದರು. ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಗುರುಪಾದಮ್ಮ ಶಿವಜೋಗಯ್ಯನವರ ಮಗನಾಗಿ 1943 ಜುಲೈ 2ರಂದು ಜನಸಿದ್ದ ಅವರು ಶ್ರೀಗಳು ತಮ್ಮ‌ ಬಾಲ್ಯ ವಿದ್ಯಾಭ್ಯಾಸವನ್ನು ಮಂಟೂರಿನಲ್ಲಿ ಪೂರ್ಣಗೊಳಿಸಿದ್ದರು. ಶಿವಯೋಗ ಮಂದಿರದಲ್ಲಿ ಅಧ್ಯಯನ ಹಾಗೂ ವಾರಾಣಾಸಿಯಲ್ಲಿ ತಮ್ಮ ಎಂ.ಎ ಸಂಸ್ಕೃತ ಅಧ್ಯಯನ ಮಾಡಿದ್ದರು. ಮಂಟೂರುನಲ್ಲಿ ಶಿವಲಿಂಗೇಶ್ವರ ಪ್ರೌಢ ಶಾಲೆ ಸ್ಥಾಪಿಸಿ‌ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಅಡವಿ ಸಿದ್ಧೇಶ್ವರ ಮಠವನ್ನು ಭಕ್ತರ ದೇಣಿಗೆ ಹಾಗೂ ಅವಿರತ ಶ್ರಮದಿಂದ ಅಭಿವೃದ್ಧಿ ಪಡಿಸಿದ್ದಾರೆ. ಭಕ್ತರೊಂದಿಗೆ ಸೇರಿ ರಾಜ್ಯಕ್ಕೆ ಮಾದರಿಯಾಗುವಂತಹ ರಥ ನಿರ್ಮಿಸಿದ್ದಾರೆ. ಅಲ್ಲಮ ಪ್ರಭು ಜನ್ಮಸ್ಥಳ ಅಭಿವೃದ್ಧಿ ವಚನಕಾರ ಅಲ್ಲಮ ಪ್ರಭುವಿನ ಜನ್ಮಸ್ಥಳ ಶಿಕಾರಿಪುರ ತಾಲೂಕು ಬೆಳ್ಳಿಗಾವಿಯ ವಿರಕ್ತಮಠದ ಅಭಿವೃದ್ಧಿಗೊಳಿಸಿದ್ದಾರೆ. ನಶಿಸಿ ಹೋಗುತ್ತಿದ್ದ ಅಲ್ಲಮಪ್ರಭುವಿನ ಮನೆಯನ್ನು ಅನುಭವ ಮಂಟಪ‌ವನ್ನಾಗಿಸಲು ಸಿದ್ಧತೆ ನಡೆಸಿದ್ದರು. ಗ್ರಂಥ ಪ್ರಕಟಣೆಗಳ ಮೂಲಕ ವಚನಗಳ ಸಂರಕ್ಷಣೆಗೆ ಮುಂದಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!