E-PAPER
17 Nov 2026, 12:21:16 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾರ್ತಿಕ ಏಕಾದಶಿ ಆಚರಣೆ: ಭಕ್ತರ ಅನುಕೂಲಕ್ಕಾಗಿ ಹುಬ್ಬಳ್ಳಿ-ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ-೦೮: ಮಹಾರಾಷ್ಟ್ರದ ಅತ್ಯಂತ ಜನಪ್ರಿಯ ಆಚರಣೆಗಳಲ್ಲಿ ಒಂದಾದ ಕಾರ್ತಿಕ ಏಕಾದಶಿ ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ಆರು ಟ್ರಿಪ್ಗಳಿಗೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

*ರೈಲು ಸಂಖ್ಯೆ 07313/07314 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲು (6 ಟ್ರಿಪ್ಗಳು)*

ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ ಕಾಯ್ದಿರಿಸದ ವಿಶೇಷ ರೈಲು ನವೆಂಬರ್ 9 ರಿಂದ 15, 2024 ರವರೆಗೆ (ನವೆಂಬರ್ 13 ಹೊರತುಪಡಿಸಿ) ಪ್ರತಿದಿನ ಸಂಜೆ 7:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 4:30 ಕ್ಕೆ ಪಂಢರಪುರವನ್ನು ತಲುಪಲಿದೆ.

ವಾಪಸು ರೈಲು ಸಂಖ್ಯೆ 07314 ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲು ನವೆಂಬರ್ 10 ರಿಂದ 16, 2024 ರವರೆಗೆ (ನವೆಂಬರ್ 14 ಹೊರತುಪಡಿಸಿ) ಪ್ರತಿದಿನ ಬೆಳಿಗ್ಗೆ 6:00 ಗಂಟೆಗೆ ಪಂಢರಪುರದಿಂದ ಹೊರಟು ಅದೇ ದಿನ ಸಂಜೆ 4:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಎರಡೂ ಮಾರ್ಗಗಳಲ್ಲಿ, ಈ ರೈಲು ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಚ್ಚಾಪುರ, ಗೋಕಾಕ ರೋಡ್, ಘಟಪ್ರಭಾ, ಚಿಕ್ಕೋಡಿ ರೋಡ್, ರಾಯಬಾಗ, ಚಿಂಚಲಿ, ಕುಡಚಿ, ಉಗಾರ ಖುರ್ದ, ಶೇಡಬಾಳ, ವಿಜಯನಗರ, ಮೀರಜ್, ಸುಲ್ಗರೆ, ಕವಠೆ-ಮಹಾಂಕಾಲ್, ಧಲಗಾಂವ್, ಜತ್ ರೋಡ್ ಮತ್ತು ಸಂಗೋಳ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲಿನಲ್ಲಿ 10 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಗಳು ಸೇರಿದಂತೆ ಒಟ್ಟು 12 ಬೋಗಿಗಳು ಇರಲಿವೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ಸೈಟ್ www.enquiry.indianrail.gov.in ಗೆ ಭೇಟಿ ನೀಡುವ ಮೂಲಕ, NTES ಅಪ್ಲಿಕೇಶನ್ ಬಳಸಿ ಅಥವಾ 139 ಸಹಾಯವಾಣಿ ನಂಬರಗೆ ಡಯಲ್ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.ಎಂದು ನೈರುತ್ಯ ರೈಲ್ವೆ, ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.