LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಪಿಯುಸಿ ವಿದ್ಯಾರ್ಥಿನಿ...!!

ಕೋಲಾರ : ಅಪ್ರಾಪ್ತ ವಯಸ್ಸಿನ ಯುವತಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಕೋಲಾರದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದನ್ನು ನೋಡಿ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.


ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.


ಕೋಲಾರದಲ್ಲಿ ಕಳೆದ ವರ್ಷ ಕೂಡ ಇಂಥದ್ದೇ ಒಂದು ಘಟನೆ ನಡೆದಿತ್ತು. ಬಾಲಕಿ ಕಾಲೇಜಿನ ಶೌಚಾಲಯದಲ್ಲಿ ಮಗುವನ್ನು ಸಾಯಿಸಿ ಅದರೊಳಗೆ‌ ಹಾಕಿ ಘಟನೆ ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಳು. ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಬಳಿಕ ಮಗುವಿನ ಕತ್ತು ಹಿಸುಕಿ ಸಾಯಿಸಿ ಶೌಚಾಲಯದೊಳಗೆ ತುರುಕಿ ನಂತರ ತಾಯಿಯನ್ನು ಕರೆಸುವಂತೆ ಉಪನ್ಯಾಸಕರಿಗೆ ಹೇಳಿದ್ದಳು. ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸಲು ಹೋದಾಗ ಮಗುವಿರುವುದು ಪತ್ತೆಯಾಗಿತ್ತು. ವಿಚಾರಣೆ ನಡೆಸಿದಾಗ ಬಾಲಕಿ ತಾನೇ ಮಗುವನ್ನು ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಳು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್4ನೇ ಬಾರಿಗೆ ಯುಪಿಎಸ್‌ಸಿ ಬರೆದು 18ನೇ ರ‍್ಯಾಂಕ್ ಪಡೆದ ಐಎಎಸ್ ರವಿ ಕುಮಾರ್ ಸಿಹಾಗ್