LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ ಕಟ್ಟೆಚ್ಚರ ವಹಿಸಲು ಸೂಚನೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌