LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

ಬೆಂಗಳೂರು : BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಭಾರತ-ಪಾಕ್ ನಡುವೆ ನೇರ ಮಾತುಕತೆ ಮೂಲಕ ಕದನವಿರಾಮ'- ಜೈಶಂಕರ್ ಸ್ಪಷ್ಟನೆಪಾಕ್‌ ಪರ ಬೇಹುಗಾರಿಕೆ ಕೇಸ್‌: ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಸಾವು..!SBI ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಪದವೀಧರ ಅಭ್ಯರ್ಥಿಗಳಿಂದ ಆಹ್ವಾನಕೋಮು, ದ್ವೇಷ ಭಾಷಣ ಕೇಸ್ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ನಟಿ ತಮನ್ನಾ ನೇಮಕ; ಸಾಮಾಜಿಕ ಜಾಲತಾಣದಲ್ಲಿ ಟೀಕೆ'ಭಾರತದ ನ್ಯಾಯಯುತವಾದ ನೀರಿನ ಪಾಲನ್ನು ಪಾಕ್ ಪಡೆಯುವುದಿಲ್ಲ'- ಮೋದಿಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಮಿಂಚಿದ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ'ರನ್ಯಾಗೆ ಪರಮೇಶ್ವರ್‌ 15- 20 ಲಕ್ಷ ರೂ. ನೀಡಿದ್ದಾರಂತೆ'- ಡಿಕೆಶಿಕನ್ನಡವನ್ನೇ ಮಾತಾಡಲ್ಲ ಎಂದ ಎಸ್‌ಬಿಐ ಮಹಿಳಾ ಮ್ಯಾನೇಜರ್‌: ಕನ್ನಡಿಗರ ಆಕ್ರೋಶ  ಬೆನ್ನಲ್ಲೇ ವರ್ಗಾವಣೆ