LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾವೇರಿ ವಿಚಾರದಲ್ಲಿ ಸರ್ಕಾರ ರಾಜ್ಯದ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿ ಕಾವೇರಿ ನೀರನ್ನು ಎಷ್ಟು ಬಳಸಿಕೊಂಡಿದೆ ಎಂದು ವಾದ ಮಾಡದೇ ರಾಜ್ಯ ಸರ್ಕಾರ ನಮ್ಮ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಅನಾರೋಗ್ಯದಿಂದ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊನ್ನೆಯೇ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದೇನೆ. ಅವರು ಈಗ ಲವಲವಿಕೆಯಿಂದ ಇದ್ದಾರೆ. ಹಾಗಾಗಿ ಬೇಗ ಗುಣಮುಖ ಆಗಲಿ ಅಂತ ಆಶಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೆಪ್ಟಂಬರ್ 6 ರಂದು ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ. ಕಾವೇರಿ ವಿಚಾರದಲ್ಲಿ ಸಿಡಬ್ಲೂಎಂಎ ಆದೇಶದಂತೆ ನೀರು ಬಿಡುತ್ತಿದ್ದಾರೆ. ನಮ್ಮವರು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿರುವ ಬಗ್ಗೆ ಸಮಗ್ರವಾಗಿ ಯಾಕೆ ವಾದ ಮಾಡುತ್ತಿಲ್ಲವೊ ಗೊತ್ತಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಷ್ಟು ಮಳೆ ಬಿದ್ದಿದೆ ಎನ್ನುವುದನ್ನು ಮನವರಿಕೆ ಮಾಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕು.

ಸೆಪ್ಟಂಬರ್ 6 ಕ್ಕೆ ವಿಚಾರಣೆ ಇದ್ದು, ಅಲ್ಲಿಯವರೆಗೂ ನೀರು ಹರಿಯುತ್ತದೆ. ಮೊದಲು ನೀರು ಹರಿಸುವುದನ್ನು ನಿಲ್ಲಿಸಿ ಆಮೇಲೆ ವಾದ ಮಾಡಬೇಕು. ನಮ್ಮ ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವುದು ಮುಖ್ಯ ಎಂದರು.

ರಾಜ್ಯ ಸರ್ಕಾರ ತಮಿಳುನಾಡು ಎಷ್ಟು ನೀರು ಬಳಕೆ ಮಾಡಿದೆ ಅಂತ ವಾದ ಮಾಡಲು ತಯಾರಿಲ್ಲಾ. ನಾವು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿಲ್ಲ, ಸರ್ಕಾರವೇ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕುಡಿಯೋ ನೀರಿನ ವಿಚಾರದಲ್ಲಿ ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಹೇಳಿದರು.

ಇನ್ನು ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆ