LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದರೆ ಕಾಶ್ಮೀರದಲ್ಲಿ ರಕ್ತದೋಕುಳಿಯಾಗುತ್ತದೆ ಎಂದು ನಾಲಿಗೆ ಹರಿಬಿಟ್ಟಿದ್ದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇದೀಗ ಮತ್ತೊಂದು ಬೆದರಿಕೆಯನ್ನು ಹಾಕಿದ್ದಾರೆ. ಪಾಕಿಸ್ತಾನದ ಸರ್ಕಾರದೊಂದಿಗೆ ಭಾರತ ಮಾತುಕತೆ ಆರಂಭಿಸದಿದ್ದರೆ ಕಾಶ್ಮೀರವು ಕೂಡ ಗಾಜಾ ಪಟ್ಟಿಯ ಹಣೆಬರಹವನ್ನೇ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಾತುಕತೆ ಮೂಲಕ ಜಮ್ಮು ಕಾಶ್ಮೀರದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದಲ್ಲಿ ಕಾಶ್ಮೀರದ ಸ್ಥಿತಿಯು ಗಾಜಾ ಹಾಗೂ ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ. ಸ್ನೇಹಿತರನ್ನು ಬದಲಿಸಬಹುದು ಆದರೆ ನೆರೆಹೊರೆಯವರನ್ನು ಬದಲಿಸಲಾಗದು ಎಂದು ಹಿಂದೆಯೇ ವಾಜಪೇಯಿಯವರು ಹೇಳಿದ್ದರು ಹಾಗಾಗಿ ನೆರೆಹೊರೆಯವರೊಂದಿಗೆ ಸ್ನೇಹದಿಂದ ಇರಬೇಕು ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಪಾಕಿಸ್ತಾನದೊಂದಿಗಿನ ಸಮಸ್ಯೆಗೆ ಯುದ್ಧ ಪರಿಹಾರವಲ್ಲ ಎಂದು ಹಾಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಹೇಳಿದ್ದಾರೆ. ಮಾತು ಕತೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಹಿಂದಿನ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಮತ್ತೆ ಅಧಿಕಾರಕ್ಕೆ ಬರುವ ಹಂತದಲ್ಲಿರುವ ನವಾಜ್ ಷರೀಫ್ ಕೂಡ ಮಾತುಕತೆಗೆ ಒತ್ತಾಯ ಮಾಡುತ್ತಿದ್ದಾರೆ. ಆದರೆ ಭಾರತ ಸರ್ಕಾರವೇ ಮಾತುಕತೆಗೆ ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಈ ರೀತಿ ಆದರೆ ಕಾಶ್ಮೀರದ ಸ್ಥಿತಿಯು ಗಾಜಾ ಹಾಗೂ ಪ್ಯಾಲೆಸ್ತೀನ್​ ರೀತಿಯಾಗುತ್ತದೆ. ಇಸ್ರೇಲಿಗಳು ಅಲ್ಲಿ ಬಾಂಬ್ ಹಾಕಿರುವಂತೆ ಇಲ್ಲಿಯೂ ಅದೇ ಸ್ಥಿತಿ ನಿರ್ಮಾಣವಾಗಬಹುದು ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜರ್ಮನಿಯಿಂದ ದುಬೈಗೆ ಬಂದ ಪ್ರಜ್ವಲ್‌ ರೇವಣ್ಣಬಿ.ಎಸ್.ವೈ ಧೃತರಾಷ್ಟ್ರ ಪ್ರೇಮಕ್ಕೆ ನಾಶದತ್ತ ಬಿಜೆಪಿ.! ಕೆ.ಮುಕುಡಪ್ಪಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ‌ ಸಾಮೂಹಿಕ ವಿವಾಹ- 123 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ'ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ'- ವೀರಪ್ಪ ಮೊಯ್ಲಿಲೈಂಗಿಕ ದೌರ್ಜನ್ಯ ಕೇಸ್‌: ಪ್ರಜ್ವಲ್‌ ವಿರುದ್ಧ ಮತ್ತೊಂದು ದೂರು ದಾಖಲುಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೆಳಗಿಳಿಯಲಿ, ಪ್ರಜ್ವಲ್‌ನನ್ನ 24 ಗಂಟೆಗಳಲ್ಲೇ ಬಂಧಿಸುತ್ತೇವೆ: ಅಶೋಕ್ ಸವಾಲುಅಮೆರಿಕ ವಿ.ವಿಯಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ- ಹಲವು ವಿದ್ಯಾರ್ಥಿಗಳು ಅರೆಸ್ಟ್‌ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿಶಾಲಾ-ಕಾಲೇಜು ದಿನಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ಬಳಸುತ್ತಿದ್ದ ಐಷಾರಾಮಿ ಕಾರಿನ ಬಗ್ಗೆ ನಿಮಗೆಷ್ಟು ಗೊತ್ತು? ಅದೀಗ ಎಲ್ಲಿದೆ ಗೊತ್ತಾ?