LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಸರಗೋಡು: ದೇವಸ್ಥಾನದ ಉತ್ಸವದ ವೇಳೆ ಪಟಾಕಿ ದುರಂತ; 154 ಮಂದಿಗೆ ಗಾಯ..!

ಕಾಸರಗೋಡು: ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

ನೀಲೇಶ್ವರಂನ ವೀರರ್ಕಾವು ದೇವಸ್ಥಾನದ ಉತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಾಂಪ್ರದಾಯಿಕ ತೆಯ್ಯಂ ಉತ್ಸವಕ್ಕಾಗಿ ಮಧ್ಯರಾತ್ರಿಯ ನಂತರ ಸುಮಾರು 1,500 ಮಂದಿ ದೇವಸ್ಥಾನದಲ್ಲಿ ಜಮಾಯಿಸಿದ್ದರು. ತೆಯ್ಯಂ ಪ್ರದರ್ಶನವನ್ನು ವೀಕ್ಷಿಸಲು ಬಂದಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ.

ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!