E-PAPER
17 Nov 2026, 12:21:28 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಿತ್ತೂರು ಕರ್ನಾಟಕ ಸೇನೆಯ ಪ್ರತಿಭಟನೆ

ಬೆಳಗಾವಿ-06:ಬೆಳಗಾವಿ ಮಹಾನಗರ ಪಾಲಿಕೆಯು ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸದೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕಿತ್ತೂರು ಕರ್ನಾಟಕ ಸೇನೆಯ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಸೇನೆ ರಾಜ್ಯಾಧ್ಯಕ್ಷ ಮಹದೇವ ತಳವಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂದು ಘೋಷಣೆ ಕೂಗಿದರು. ನಂತರ ಪ್ರಾದೇಶಿಕ ಆಯುಕ್ತ ಜಾನಕಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ, 2005ರ ಅಕ್ಟೋಬರ್ 27ರಂದು ಪಾಲಿಕೆ ಅಂಗೀಕರಿಸಿದ್ದ ಮಹಾರಾಷ್ಟ್ರ ಪರ ಗೊತ್ತುವಳಿ ರದ್ದುಗೊಳಿಸಿ, ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸುವಂತೆ ಒತ್ತಾಯಿಸಿದರು.

2004ರಿಂದ ಸುಪ್ರೀಂಕೋರ್ಟ್‌ನಲ್ಲಿ ಗಡಿ ವಿವಾದ ಪ್ರಕರಣ ಬಾಕಿ ಇದೆ. ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಪಾಲಿಕೆಯ 2005ರ ಗೊತ್ತುವಳಿಯನ್ನು ಪೂರಕ ದಾಖಲೆಯಾಗಿ ಬಳಸುತ್ತಿದೆ. ಅದಕ್ಕೆ ಪ್ರತಿಯಾಗಿ ಕರ್ನಾಟಕ ಪರ ಗೊತ್ತುವಳಿ ಅಂಗೀಕಾರವಾಗಬೇಕು ಎಂದು ಮಾರ್ಚ್ 26ರಿಂದ 20ಕ್ಕೂ ಹೆಚ್ಚು ಕನ್ನಡ ಸಂಘಟನೆಗಳು ಹೋರಾಟ ನಡೆಸುತ್ತಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಪಾಲಿಕೆಯಲ್ಲಿ ಬಿಜೆಪಿಗೆ 35 ಸದಸ್ಯರ ಬಹುಮತವಿದೆ. ಎರಡು ತಿಂಗಳಾದರೂ ಗೊತ್ತುವಳಿ ಅಂಗೀಕಾರವಾಗಿಲ್ಲ. ಇದು ಕನ್ನಡ ನಾಡು-ನುಡಿಗೆ ಮಾಡಿದ ದ್ರೋಹ ಎಂದು ಮಹದೇವ ತಳವಾರ ಅಸಮಾಧಾನ ವ್ಯಕ್ತಪಡಿಸಿದರು. ಪಾಲಿಕೆಯ ದುರಾಡಳಿತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಗೊತ್ತುವಳಿಗೆ ವಿರೋಧಿಸುವ ಜನಪ್ರತಿನಿಧಿಗಳನ್ನು ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಪಾಲಿಕೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಹೇಶ ಶಿಗ್ಗಹಳ್ಳಿ, ಕೊಟ್ರೇಶ ಪಟ್ಟಣಶೆಟ್ಟಿ, ರವಿ ಹಾಜೇಲ, ರತ್ನಾ ಗೋನಿ, ದೇವೇಂದ್ರ ತಳವಾರ, ರಮೇಶ ರಾಮನಗೌಡ, ಶಿವಾನಂದ ಕೋಲಕಾರ ಸೇರಿದಂತೆ ಸೇನೆಯ ಪದಾಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.