LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುರಿ ಸಾಗಣಿಕೆಗೆ  ಅರ್ಜಿ ಆಹ್ವಾನ

 

ಚಿತ್ರದುರ್ಗ : ಜುಲೈ.16: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ   2024-25ನೇ ಸಾಲಿಗೆ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20+1 ಕುರಿ ಅಥವಾ ಮೇಕೆ ಸಾಗಣಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ  ಕೃಷಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ನೊಂದಾಯಿಸಿಕೊAಡ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಗೆ ಒಟ್ಟು 706 ಘಟಕಗಳನ್ನು ನೀಡಲು ಗುರಿ ನಿಗಧಿ ಮಾಡಲಾಗಿದೆ. ಪ್ರತಿ ಘಟಕ್ಕೆ ರೂ.1,75,000/- ವೆಚ್ಚ ನಿರ್ಧರಿಸಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ ರೂ.43,750 ಸಹಾಯ ಧನ ನೀಡಲಾಗುವುದು. ಫಲಾನುಭವಿಗಳು ರೂ.43,750ಗಳ ವಂತಿಕೆ ನೀಡಬೇಕು. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿAದ ರೂ.87,500ಕ್ಕೆ ಶೇ.9.26ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರಕಲಿದೆ. ಫಲಾನುಭವಿಗಳು 20+1 ಕುರಿ ಅಥವಾ ಮೇಕೆಗಳನ್ನು ಖರೀದಿಸಿ ಸ್ವಂತವಾಗಿ ಸಾಗಾಣಿಕೆ ಮಾಡಬಹುದು.

ಕುರಿ ಮತ್ತು ಉತ್ಪಾದಕರ ಸಹಕಾರ ಸಂಘಗಳಲ್ಲಿ ಅರ್ಜಿಗಳು ದೊರೆಯುತ್ತವೆ. ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಹಕಾರಿ ಸಂಘ ಅಥವಾ ಚಿತ್ರದುರ್ಗ ಪಶು ಆಸ್ಪತ್ರೆ ಆವರಣದಲ್ಲಿರುವ ನಿಗಮದ ಸಹಾಯಕ ನಿರ್ದೇಶಕ ಕಚೇರಿಗೆ ಜುಲೈ 31 ರ ಸಂಜೆ 5:30ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-222718, ಮೊಬೈಲ್ ಸಂಖ್ಯೆ 9448656231ಕ್ಕೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ