E-PAPER
17 Nov 2026, 12:23:18 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಡಿ.27 ರಿಂದ

ಹೆಚ್ಚಿನ ಸಮೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆಗೆ ಸಲಹೆ ನೀಡಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ-22: ಜಿಲ್ಲೆಯ ಖಾನಾಪೂರ ಹಾಗೂ ಬೆಳಗಾವಿ ಗ್ರಾಮಿಣ ತಾಲೂಕುಗಳಲ್ಲಿ ಕುಷ್ಠರೋಗ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದ್ದು, ಅಂತಹ ಪ್ರದೇಶಗಳಲ್ಲಿ ಕೂಡಲೇ ಸಮೀಕ್ಷೆ ಕೈಗೊಂಡು ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ 2023-24 ನೇ ಸಾಲಿನ (LCDC)ರ ಕಾರ್ಯಕ್ರಮದಡಿ ಡಿಸೆಂಬರ್ 27 ರಿಂದ ಜನವರಿ 11, 2024 ರ ವರೆಗೆ ನಡೆಯಲಿರುವ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನವನ್ನು ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಷ್ಠರೋಗ ಪ್ರಕರಣಗಳ ಕುರಿತು ಸಮೀಕ್ಷೆ ನಡೆಸಿ, ಹೆಚ್ಚುತ್ತಿರುವ ಪ್ರಕರಣಗಳನ್ನು ಪತ್ತೆ ಮಾಡಬೇಕು ಅದರಂತೆ ಅಗತ್ಯ ಚಿಕಿತ್ಸೆ ನೀಡಬೇಕು. ರೋಗ ಲಕ್ಷಣಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಸೂಕ್ತ ಚಿಕಿತ್ಸೆಗೆ ಸಲಹೆ ನೀಡಬೇಕು ಎಂದು ತಿಳಿಸಿದರು.

ಜಾಗೃತಿ ಬಿತ್ತಿ ಪತ್ರಗಳ ಬಿಡುಗಡೆ:

ಇದೇ ವೇಳೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು. ಅದೇ ರೀತಿಯಲ್ಲಿ ಜಿಲ್ಲಾಡಳಿತ ಮೂಲಕ ಕುಷ್ಠರೋಗ ಅಭಿಯಾನದ ಕುರಿತು ಸಂದೇಶ ನೀಡಿದರು.

ಜಿಲ್ಲಾಡಳಿತ ಸಂದೇಶ:

"ಡಿಸೆಂಬರ್ 27, 2023 ರಿಂದ ಜನವರಿ 11, 2024 ರವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವಿಕೆ ಅಭಿಯಾನ ನಡೆಯಲ್ಲಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ, ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕರು ಮನೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಕೈಗೊಳ್ಳಲಿದ್ದಾರೆ, ಆದ್ದರಿಂದ ತಾವೆಲ್ಲರೂ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಿ, ಭಾರತ ದೇಶವನ್ನು ಕುಷ್ಠರೋಗ ಮುಕ್ತ ಮಾಡುವ ಗಾಂಧೀಜಿಯವರ ಕನಸನ್ನು ನನಸಾಗಿಸೋಣ"

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕೋಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ವಿಠ್ಠಲ ಶಿಂಧೆ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ಗಡೇದ, ಎಲ್ಲಾ ತಾಲೂಕು ತಹಶೀಲ್ದಾರಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ಗೀತಾ ಕಾಂಬಳೆ, ಜಿಲ್ಲಾ ಸಮೀಕ್ಷಾಧಿಕಾರಿ ಡಾ. ಸಂಜಯ ದೊಡ್ಡಮನಿ ಮತ್ತು ಜಿಲ್ಲೆಯ ತಾಲೂಕಾ ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಸ್ಥಿತರಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.