ಬೆಂಗಳೂರು : ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಸಚಿವರ ಗಮನಕ್ಕೆ ತಂದಿದ್ದರು.
ಈ ಸಂಬಂಧ ಇವತ್ತು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಸರ್ಕಾರಿ ವಾಹನಗಳ ನಿಲ್ದಾಣದ ಕಡೆ ಭೇಟಿ ನೀಡಿ ಪರಿಶೀಲನೆ ಮಾಡಿದರು, ಅಧಿಕಾರಿ ವರ್ಗದವರು ಏನೆಲ್ಲ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ ಮಳೆಗಾಲದ ಸಂದರ್ಭದಲ್ಲಿ ಬಸ್ಸು ನಿಲ್ಲಿಸಲು ಇರುವ ಅನುಕೂಲಗಳೇನು ಅನಾನುಕೂಲಗಳೇನು ಎಂಬುದರ ಬಗ್ಗೆ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಈ ಬಗ್ಗೆ ಮಾನ್ಯ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿರುತ್ತಾರೆ.
ಮೊದಲನೇ ಹಂತದಲ್ಲಿ ಸದರಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ ಹಂತದಲ್ಲಿ ಇನ್ನೆರಡು ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ ನೀಡಿರುತ್ತಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು.
ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು.ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬೆಂ.ಮ.ಸಾ.ಸಂಸ್ಥೆಯ ಬಸ್ ನಿಲ್ದಾಣಕ್ಕೂಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಸೂಚಿಸಿದರು.
ಕರಾರಸಾ ನಿಗಮದ ಮಾನ್ಯ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಿ), ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ರವರು ಹಾಜರಿದ್ದು ಚಾಲನಾ ಸಿಬ್ಬಂದಿಗಳ ವಿಶ್ರಾಂತಿ ಗೃಹ ಹಾಗೂ ಇನ್ನಿತರೆ ವ್ಯವಸ್ಥೆಗಳ ಕುರಿತು ಪರಿವೀಕ್ಷಣೆ ನಡೆಸಿದರು.
ಸಚಿವರು ಮೆಜಸ್ಟಿಕ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.