E-PAPER
17 Nov 2026, 12:22:22 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೆಎಲ್ಇ ಸಂಸ್ಥೆಯು ನೂತವಾಗಿ ಪ್ರಾರಂಭಿಸಿರುವ ಕೆಎಲ್ಇ ಡಾ. ಸಂಪತಕುಮಾರ ಹಾಗೂ ಡಾ. ಉದಯಾ ಶಿವಣಗಿ ಕ್ಯಾನ್ಸರ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಣೆ

ಬೆಳಗಾವಿ-೦೩:ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಆದಿವಾಸಿ ಜನರ ಆರೋಗ್ಯ ಕಾಪಾಡುವಲ್ಲಿ ಸದಾ ಕಾರ್ಯಮಗ್ನವಾಗಬೇಕಾಗಿದೆ. ಭಾರತದಂತ ರಾಷ್ಟ್ರದಲ್ಲಿ ಎಲ್ಲರಿಗೂ ಆರೋಗ್ಯ ವ್ಯವಸ್ಥೆ ಕಲ್ಪಿಸುವದು ಇಂದು ಅತ್ಯಗತ್ಯವಾಗಿದೆ. ಆದ್ದರಿಂದಲೇ ಕೇಂದ್ರ ಸರಕಾರವು ಆಯುಷ್ಯಮಾನ ಭಾರತದಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಮುಖ್ಯವಾಗಿ ಕ್ಯಾನ್ಸರ ಪೀಡಿತ ಜನರಿಗೆ ಸೂಕ್ತ ಚಿಕಿತ್ಸೆ ಮತ್ತು ಕ್ಯಾನ್ಸರ ತಪಾಸಣೆಯನ್ನು ತೀವ್ರಗೊಳಿಸಬೇಕು. ಅದಕ್ಕಾಗಿಯೇ ಕರ್ನಾಟಕದಲ್ಲಿ ಕೆಎಲ್ ಇ ಸಂಸ್ಥೆಯು ಅತ್ಯಾಧುನಿಕವಾದ ಕ್ಯಾನ್ಸರ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗಿದೆ ಎಂದು ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಶುಕ್ರವಾರ ಹೇಳಿದರು.
ಕೆಎಲ್ಇ ಸಂಸ್ಥೆಯು ನೂತವಾಗಿ ಪ್ರಾರಂಭಿಸಿರುವ ಕೆಎಲ್ಇ ಡಾ. ಸಂಪತಕುಮಾರ ಹಾಗೂ ಡಾ. ಉದಯಾ ಶಿವಣಗಿ ಕ್ಯಾನ್ಸರ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಐಸಿಎಂಆರ್ ಸಮೀಕ್ಷೆಯಂತೆ ದೇಶದಲ್ಲಿ ಸುಮಾರು 20 ಮಿಲಿಯನಗೂ ಅಧಿಕ ಜನರ ಪ್ರತಿವರ್ಷ ಕ್ಯಾನ್ಸರ ಪೀಡಿತರಾಗುತ್ತಿದ್ದು, ಸುಮಾರು 7 ಮಿಲಿಯನಗೂ ಅಧಿಕ ಜನರು ಪ್ರತಿವರ್ಷ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಪ್ರತಿ ಮೂಲೆಯಲ್ಲೂ ಕ್ಯಾನ್ಸರ ಆಸ್ಪತ್ರೆ ಕಾರ್ಯನಿರ್ವಹಿಸುವಂತಾಗಬೇಕು. ಅಲ್ಲದೇ ಉಚಿತ ಹಾಗೂ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗಬೇಕು. ಅದರಲ್ಲಿಯೂ ಮುಖ್ಯವಾಗಿ ಹಿರಿಯ ನಾಗರೀಕರಿಗೆ ಅನೇಕ ರೋಗಗಳು ಭಾಧಿಸುತ್ತಿದ್ದು, ಅದರಲ್ಲಿ ಕ್ಯಾನ್ಸರ ಅತೀ ಹೆಚ್ಚು ಪರಿಣಾಮ ಬೀರುತ್ತದೆ. ಅದಕ್ಕಾಗಿ ಅದರ ಕುರಿತು ಹಚ್ಚೆಚ್ಚು ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಆರೋಗ್ಯಯುತ ಸಮಾಜ ನಿರ್ಮಾಣವಾದರೆ ಮಾತ್ರ ಸಮಾಜ ಸುಧಾರಣೆಯಾಗುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಟುಂಭದಲ್ಲಿ ಹುಡುಗರ ಆರೋಗ್ಯಕ್ಕೆ ನೀಡಿದ ಮಹತ್ವವನ್ನು ಹುಡುಗಿರಿಗೆ ನೀಡುತ್ತಿಲ್ಲ.ಹುಡುಗಿಯರ ಆರೋಗ್ಯವನ್ನು ಕಡೆಗಣಿಸದೇ ಅವರಿಗೂ ಮಹತ್ವ ನೀಡಬೇಕು. ಮಹಿಳೆಯರ ಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು. ಕೆಲವೊಮ್ಮೆ ಕ್ಯಾನ್ಸರ ಸಮಸ್ಯೆ ಕಂಡುಬಂದರೆ ಶೀಘ್ರವೇ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಸರಕಾರವು ಚಿಕಿತ್ಸೆ ಅನೆಕ ಯೋಜನೆಗಳನ್ನು ರೂಪಿಸಿದೆ. ಗ್ರಾಮಿಣ ಹುಡುಗಿರ ಆರೋಗ್ಯ ಸುರಕ್ಷತೆಗೆ ಗಮನಹರಿಸಬೇಕು ಎಂದರು.
ಒಳ್ಳೆಯ ಗುಣಮಟ್ಟದ ಚಿಕಿತ್ಸೆಯೂ ಸಕಲರಿಗೆ ಲಭಿಸಬೇಕು. ವೈದ್ಯಕೀಯ ವೃತ್ತಿಯಲ್ಲಿರುವವರು ಭಾರತದ ಆರೋಗ್ಯದ ಭವಿಷ್ಯವನ್ನು ರೂಪಿಸಬೇಕು. ವೈದ್ಯಕೀಯ ಕ್ಷೇತ್ರವು ಸದಾ ಆವಿಷ್ಕಾರದಿಂದ ಕೂಡಿದ್ದು, ಅವುಗಳ ಪರಿಣಾಮಕಾರಿಯಾದ ಚಿಕಿತ್ಸಾ ಪದ್ದತಿಯೂ ಜನರಿಗೆ ತಲುಪಿಸಬೇಕು ಎಂದ ಅವರು, ಕೆಎಲ್ಇ ಸಂಸ್ಥೆಯು ಈ ಭಾಗದ ಜನರ ಸಂಜೀವಿಣಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹಲವು ಜನರ ಆರೋಗ್ಯ ಕಾಪಾಡುವಲ್ಲಿ ಮಗ್ನವಾಗಿದೆ. ಸಂಸ್ಥೆಯು ಶತಮಾನದ ಿತಿಹಾಸವಿರುವ ಶಿಕ್ಷಣ, ಆರೋಗ್ಯ ಮತ್ತು ಕೃಷಿ ಸಂಬಂಧಿತ ಸೇವೆಗಳನ್ನು ಕಲ್ಪಿಸುತ್ತಿರುವದು ಅತ್ಯಂತ ಶ್ಲಾಘನೀಯ ಎಂದರು.
ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಷಿ ಅವರು ಮಾತನಾಡಿ,ಇತ್ತೀಚಿನ ದಿನಗಳಲ್ಲಿ ಜೀವನಶೈಲಿ ಹಾಗೂ ಆಹಾರ ಪದ್ದತಿಯಿಂದಾಗಿ ಕ್ಯಾನ್ಸರ ರೋಗವು ಅತ್ಯಧಿಕವಾಗಿ ಕಂಡು ಬರುತ್ತಿದ್ದು, ಆರಂಭಿಕವಾಗಿ ಕಂಡು ಹಿಡಿದ ಚಿಕಿತ್ಸೆ ನೀಡಬೇಕಾಗಿದೆ. ಅದಕ್ಕಾಗಿ ಗ್ರಮೀಣ ಪ್ರದೇಶ ಜನರ ಆರೋಗ್ಯ ಸುಧಾರಿಸಲು ಅತೀ ಹೆಚ್ಚು ಅನುದಾನ ನೀಡಲಾಗುತ್ತಿದೆ. ಸರ್ವಜ್ಞನ ವಚನದಂತೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಕೆಎಲ್ ಇ ಸಂಸ್ಥೆಯು ಈ ಭಾಗದ ಅನಾರೋಗ್ಯವನ್ನು ಹೋಗಲಾಡಿಸಲು ಒಳ್ಳೆಯ ಕಾರ್ಯನಿರ್ವಹಿಸುತ್ತಿದೆ. ಈಗ ಸುಸಜ್ಜಿತವಾದ ಕ್ಯಾನ್ಸರ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಿರುವದು ಅತ್ಯಂತ ಶ್ಲಾಘನೀಯ ಎಂದರು.
ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಮಾತನಾಡಿ, ದಾನಿಗಳಿಂದಲೇ ಕೆಎಲ್ಇ ಸಂಸ್ಥೆಯು ಹೆಮ್ಮರವಾಗಿ ಬೆಳೆದು ಬಂದಿದೆ. ಸಪ್ತರ್ಷಿಗಳು ನೆಟ್ಟು ಸಸಿ ಇಂದು ಬೃಹದಾಕಾರವಾಗಿದ್ದು, ಅಗತ್ಯವಿರುವ ಎಲ್ಲ ಹಂತದ ಮತ್ತು ವಿಧದ ಶಿಕ್ಷಣ ನೀಡುತ್ತಿದೆ. ಮುಖ್ಯವಾಗಿ ಆರೋಗ್ಯ, ತಾಂತ್ರಿಕ ಹಾಗೂ ಕೃಷಿ ವಿಜ್ಞಾನ ಶಿಕ್ಷಣದ ಜೊತೆಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ. ಈ ಭಾಗದಲ್ಲಿಕ್ಯಾನ್ಸರ ಅತೀ ಹೆಚ್ಚು ಕಂಡು ಬರುತ್ತಿದ್ದು, ಅದರ ನಿರ್ಮೂಲನೆಗಾಗಿ ಸುಮಾರು 300 ಹಾಸಿಗೆಗಳ ಆಸ್ಪತ್ರೆಯನ್ನು ಜನಸೇವೆಗೆ ನೀಡಲಾಗಿದೆ. ಎಲ್ಲ ರೀತಿಯ ಕ್ಯಾನ್ಸರಗೆ ಒಂದೇ ಸೂರಿನಡಿ ಚಿಕಿತ್ಸೆ ಲಭಿಸುವಂತೆ ರೂಪಿಸಲಾಗಿದೆ ಎಂದು ತಿಳಿಸಿದರು.
ವೇದಿಕೆ ಮೇಲೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕೊಹೊಳಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಂಸದರಾದ ಜಗದೀಶ ಶೆಟ್ಟರ, ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಹಾಗೂ ಸಮಾರಂಭದಲ್ಲಿ ದಾನಿಗಳಾದ ಡಾ. ಸಂಪತಕುಮಾರ ಎಸ್ ಶಿವಣಗಿ ಹಾಗೂ ಡಾ. ಉದಯಾ ಶಿವಣಗಿ ಸೇರಿದಂತೆ ಮುಂತಾದವರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.