ಕೆ.ಎಸ್.ಈಶ್ವರಪ್ಪ ಸೆಡ್ಡ್ ಹೊಡೆದು ಬಂಡಾಯ ಅಭ್ಯರ್ಥಿ.! ಕಣದಲ್ಲಿ 23 ಮಂದಿ .!
ಶಿವಮೊಗ್ಗ : ಮೇ 7 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಕಣದಲ್ಲಿ ಉಳಿಯುವ ಮೂಲಕ ಪಕ್ಷದ ವಿರುದ್ಧ ಬಂಡಾಯದ ಸಮರಕ್ಕೆ ಸನ್ನದ್ಧರಾಗಿದ್ದೇನೆಂಬ ಸಂದೇಶವನ್ನು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬ ಮತ್ತು ಬಂದ ಬಿಜೆಪಿ ಹೈಕಮಾಂಡ್ ಗೆ ರವಾನಿಸಿದ್ದಾರೆ.
ನಾಮಪತ್ರ ಹಿಂತೆಗೆತಕ್ಕೆ ಇಂದು ಅಂತಿಮ ದಿನವಾಗಿದ್ದು ಈಶ್ವರಪ್ಪ ನಾಮಪತ್ರ ಹಿಂತೆದುಕೊಂಡಿಲ್ಲ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕಣದಲ್ಲಿರುವ ಕಲಿಗಳು ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.