LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರದ 2024-25ರ ಬಜೆಟ್ ವಿರುದ್ಧ ಇಂಡಿಯಾ ನಾಯಕರ ಧರಣಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿರುವ 2024-25ರ ಬಜೆಟ್‌ನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ತಾರತಮ್ಯ ಮಾಡಿದೆ ಎಂದು ಇಂಡಿಯಾ ಒಕ್ಕೂಟ ಆರೋಪಿಸಿದ್ದು, ಸಂಸತ್ತಿನ ಎದುರು ಇಂದು ಧರಣಿ ನಡೆಸಿದರು.

ಇಂಡಿಯಾ ಒಕ್ಕೂಟದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಟಿಎಂಸಿ, ಸಮಾಜವಾದಿ ಪಕ್ಷದ ನಾಯಕರು, ಡಿಎಂಕೆ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನಕಾರರು 'ನಮಗೆ ಭಾರತ ಬಜೆಟ್ ಬೇಕು ಎನ್‌ಡಿಎ ಬಜೆಟ್ ಅಲ್ಲ', 'ಎನ್‌ಡಿಎಯಿಂದ ಬಜೆಟ್‌ನಲ್ಲಿ ಭಾರತಕ್ಕೆ ದ್ರೋಹ' ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ 'ಈ ಬಜೆಟ್ ಜನ ವಿರೋಧಿಯಾಗಿದೆ, ಇದರಿಂದ ಯಾರಿಗೂ ನ್ಯಾಯ ದೊರೆತಿಲ್ಲ. ವಿಶೇಷ ಪ್ಯಾಕೇಜ್ ಬಗ್ಗೆ ಹೇಳಿದರೇ ಹೊರತು, ರಾಜ್ಯಗಳಿಗೆ ನೀಡುವ ವಿಶೇಷ ಸ್ಥಾನಮಾನದ ಬಗ್ಗೆ ಉಲ್ಲೇಖಿಸಲೇ ಇಲ್ಲ. ಇದೊಂದು ವಂಚನೆಯ ಬಜೆಟ್ ಆಗಿದ್ದು, ಜನರಿಗೆ ಅನ್ಯಾಯವಾಗಿದೆ' ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮಾತನಾಡಿ, ಒಕ್ಕೂಟ ಸರ್ಕಾರವನ್ನು ಉಳಿಸಿಕೊಳ್ಳಲು ಕೇಂದ್ರ ಬಜೆಟ್ ಮೂಲಕ ಎಲ್ಲಾ ತತ್ವಗಳನ್ನು ಉಲ್ಲಂಘಿಸಿದೆ. ಸರ್ಕಾರವನ್ನು ರಕ್ಷಿಸಿಕೊಳ್ಳುವುದು ಬಜೆಟ್‌ನ ಉದ್ದೇಶವಾಗಿತ್ತು. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಅನುದಾನ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಇತರ ರಾಜ್ಯಗಳಿಗೂ ನ್ಯಾಯ ಸಿಗಬೇಕು. ಅದಕ್ಕಾಗಿಯೇ ನಾವು ಈ ಪ್ರತಿಭಟನೆ ನಡೆಸುತ್ತಿದ್ದೇವೆ' ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…