LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ: ಬಾಲಕ ಮೃತ್ಯು, ದಂಪತಿ ಗಂಭೀರ

ಬೆಂಗಳೂರು: ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೇ 5 ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.

ಮೃತ ಮಗು ಧೀರಜ್ (5) ಎಂದು ತಿಳಿದು ಬಂದಿದೆ.

ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಾಲರಾಜ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಗನಿಗಾಗಿ ಮನೆಗೆ ಕೇಕ್‌ ತೆಗೆದುಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜೊತೆ ಸೇರಿ ಮೂವರು ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು‌ ಹೇಳಲಾಗಿದೆ.

ತಕ್ಷಣ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಧೀರಜ್‌ ತೀವ್ರ ಅಸ್ವಸ್ಥಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬಾಲರಾಜ್, ನಾಗಲಕ್ಷ್ಮಿ ದಂಪತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.

ಕೆಪಿ ಅಗ್ರಹಾರ ಠಾಣೆ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೇಕ್ ತಂದಿದ್ದು ಯಾವ ಬೇಕರಿಯಿಂದ? ಕೇಕ್‌ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪುಡ್ ಪಾಯನ್ಸ್‌ನಿಂದ ಸಾವು ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ ನಿಜಾಂಶ ತಿಳಿದು ಬರಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಾವಣಗೆರೆ; ನಾಳೆ. ಫೆ.25 ರಂದು ಈಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ವಿವಿಧ ಭಾಷೆಗಳಲ್ಲಿ ಶಾಸಕರಿಂದ ಪ್ರಮಾಣವಚನ; ಭಾಷಾ ವೈವಿಧ್ಯತೆಗೆ ಸಾಕ್ಷಿಯಾದ ಅಧಿವೇಶನ'ಕಂಡಕ್ಟರ್ ಮೇಲೆ ದಾಖಲಾಗಿರುವ ಪೋಕ್ಸೋ ಕೇಸ್ ಬಗ್ಗೆ ತನಿಖೆ ನಡೆಸುತ್ತೇವೆ'- ಲಕ್ಷ್ಮೀ ಹೆಬ್ಬಾಳ್ಕರ್'ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ವಿಜಯೇಂದ್ರ ಆಗ್ರಹ'ವಾಟ್ಸ್​ಆ್ಯಪ್ ಮೂಲಕವೂ ಪೊಲೀಸರಿಗೆ ದೂರು- ಇ-ಎಫ್‌ಐಆರ್ ದಾಖಲುದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ'ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ, ಆಂತರಿಕವಾಗಿ ವಿರೋಧಿಸುತ್ತಿದ್ದಾರೆ'- ಸಿಎಂಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ'ನಮ್ಮ ಕಂಡಕ್ಟರ್ ಮೇಲೆ ಬೇಕಂತಲೇ ಪೋಕ್ಸೋ ಕೇಸ್ ಕೊಟ್ಟಿದ್ದಾರೆ'- ಸಚಿವ ರಾಮಲಿಂಗಾರೆಡ್ಡಿಮಹಾಕುಂಭಮೇಳದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀರ್ಥಸ್ನಾನ