LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಜ್ರಿವಾಲ್ ಅರ್ಜಿಯ ಮೇರೆಗೆ ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿಗೊಳಿಸಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಕೇಜ್ರಿವಾಲ್ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ಮೇರೆಗೆ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು ಇಂದು ಪ್ರಕರಣದ ವಿಚಾರಣೆ ನಡೆಸಿದೆ. ವಿಚಾರಣೆ ಬಳಿಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು, 7 ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ.

ಸಿಬಿಐನ ಬಂಧನ ಮತ್ತು ರಿಮಾಂಡ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ವಾದ ಮಂಡಿಸಿದ ಕೇಜ್ರಿವಾಲ್ ಪರ ವಕೀಲರು, ಬಂಧನದ ಅವಶ್ಯಕತೆ ಏನು? ಸಿಬಿಐ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಬಂಧಿಸುವ ಪ್ರಶ್ನೆಯೇ ಇಲ್ಲ. 2022 ರ ಎಫ್‌ಐಆರ್ ಅನ್ನು ಏಪ್ರಿಲ್ 2023 ರಲ್ಲಿ ವಿಚಾರಣೆ ನಡೆಸಲಾಯಿತು ಮತ್ತು ಈಗ 2024 ರ ಜೂನ್‌ನಲ್ಲಿ ಬಂಧಿಸಲಾಗಿದೆ. ಏಜೆನ್ಸಿಗೆ ಕೆಲವು ಕಾರಣವಿರಬೇಕು ಅಥವಾ ಬಂಧನಕ್ಕೆ ಆಧಾರವಾಗಿ ಕೇಜ್ರಿವಾಲ್ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದರು ಎಂದು ವಾದಿಸಿದ್ದಾರೆ‌.

ನೀವು ಬಂಧನವನ್ನು ರದ್ದುಪಡಿಸಲು ಮತ್ತು ಕಸ್ಟಡಿಯಿಂದ ಬಿಡುಗಡೆ ಮಾಡಲು ಒತ್ತಾಯಿಸುತ್ತಿದ್ದೀರಿ ಎಂದು ವಕೀಲರಿಗೆ ಹೇಳಿದ ನ್ಯಾಯಾಲಯವು, ಕೇಜ್ರಿವಾಲ್ ಅವರ ಅರ್ಜಿಯ ಮೇಲೆ ಕೋರ್ಟ್ ನೋಟಿಸ್ ಜಾರಿಗೊಳಿಸಿ ಸಿಬಿಐಗೆ ನಿರ್ದೇಶಿಸಿತು. ‌ ಪ್ರಕರಣದ ಮುಂದಿನ ವಿಚಾರಣೆ ಜುಲೈ 17 ರಂದು ನಡೆಯಲಿದೆ. ಜೂನ್ 29 ರಂದು, ಎಎಪಿ ಮುಖ್ಯಸ್ಥರನ್ನು ಸಿಟಿ ಕೋರ್ಟ್‌ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತೀರ್ಪು ನೀಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ